ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ: ₹ 350 ಕೋಟಿ ಜಪ್ತಿ; ಬಿಜೆಡಿ, ಕಾಂಗ್ರೆಸ್‌, ಬಿಜೆಪಿ ಪರಸ್ಪರ ಕೆಸರೆರಚಾಟ

Published 12 ಡಿಸೆಂಬರ್ 2023, 5:29 IST
Last Updated 12 ಡಿಸೆಂಬರ್ 2023, 5:29 IST
ಅಕ್ಷರ ಗಾತ್ರ

ಭುವನೇಶ್ವರ: ತೆರಿಗೆ ವಂಚನೆ ಪ್ರಕರಣ ಸಂಬಂಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಒಡಿಶಾದ ಭುವನೇಶ್ವರದಲ್ಲಿ ₹ 350 ಕೋಟಿ ಜಪ್ತಿ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ, ಬಿಜೆಡಿ ಮತ್ತು ಕಾಂಗ್ರೆಸ್‌ ಪಕ್ಷಗಳು ಪರಸ್ಪರ ವಾಗ್ದಾಳಿ ನಡೆಸಿವೆ.

ಬಿಜೆಪಿ ಅಧ್ಯಕ್ಷ ಮನ್‌ಮೋಹನ್‌ ಸಮಾಲ್‌ ನೇತೃತ್ವದಲ್ಲಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿ, ಬಿಜೆಡಿ ಸರ್ಕಾರ ಅಕ್ರಮದಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದೆ. ಬೇರೆ ರಾಜ್ಯಗಳ ಡಿಸ್ಟಿಲರಿ ದೊರೆಗಳಿಗೆ ಪರವಾನಿಗಿ ನೀಡಿ ಸರ್ಕಾರದ ಪ್ರಮುಖರು ಹಣ ಪಡೆದಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಬಿಜೆಪಿ ಆರೋಪಿಸಿದೆ.

ಕೇಂದ್ರದ ಬಿಜೆಪಿ ಸರ್ಕಾರ ಕಾಂಗ್ರೆಸ್‌ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ಪ್ರಾದೇಶಿಕ ಪಕ್ಷಗಳ ಮೇಲೆ ದಾಳಿ ಮಾಡುತ್ತಿದೆ. ಐಟಿ, ಇ.ಡಿಗಳ ಮೂಲಕ  ಕೇಂದ್ರ ಸರ್ಕಾರ ಪ್ರಾದೇಶಿಕ ಪಕ್ಷಗಳನ್ನು ಬೆದರಿಸುತ್ತಿದೆ ಎಂದು ಬಿಜೆಡಿ ಮುಖಂಡರು ಆರೋಪಿಸಿದ್ದಾರೆ. 

ಈ ಪ್ರಕರಣದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಡಿ ಮತ್ತು ಬಿಜೆಪಿ ಮಾಡುತ್ತಿರುವ ಆರೋಪಗಳು ಹಾಸ್ಯಾಸ್ಪವಾಗಿವೆ. ಬಿಜೆಡಿ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಕಾಂಗ್ರೆಸ್ ವಕ್ತಾರೆ ರಜನಿ ಮೊಹಾಂತಿ ತಿಳಿಸಿದ್ದಾರೆ.

ಭುವನೇಶ್ವರದ ಬೌದ್‌ ಡಿಸ್ಟಿಲರಿ ಪ್ರೈವೇಟ್‌ ಲಿಮಿಟೆಡ್‌ನ ವಿವಿಧ ಕಚೇರಿಗಳು ಹಾಗೂ ವಿವಿಧ ಡಿಸ್ಟಿಲರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಸಂದರ್ಭದಲ್ಲಿ ಸುಮಾರು ₹ 350 ಕೋಟಿಗೂ ಹೆಚ್ಚು ಹಣವನ್ನು ಜಪ್ತಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT