ಬೆರ್ಹಾಂಪುರ (ಒಡಿಶಾ): ಜೂನ್ 4ರಂದು ಒಡಿಶಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಅಂದೇ ರಾಜ್ಯದಲ್ಲಿ ಬಿಜೆಡಿ ಸರ್ಕಾರದ ಅವಧಿ ಮುಕ್ತಾಯವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ರಾಜ್ಯದ ಬೆರ್ಹಾಂಪುರದಲ್ಲಿ ತಮ್ಮ ಮೊದಲ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ತಮ್ಮನ್ನು ಜಗನ್ನಾಥನ ಮಗ ಎಂದು ಕರೆದುಕೊಂಡಿದ್ದಾರೆ. ಒಡಿಶಾವನ್ನು ದೇಶದ ನಂಬರ್ ಒನ್ ರಾಜ್ಯವನ್ನಾಗಿ ಮಾಡಲು ಬಿಜೆಪಿಗೆ ಅವಕಾಶ ನೀಡುವಂತೆ ಅವರು ಜನರಲ್ಲಿ ಮನವಿ ಮಾಡಿದರು.

ಬಿಜೆಡಿ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, 'ಒಡಿಶಾಗೆ ಒಡಿಯಾ ಭಾಷೆ ಮತ್ತು ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳುವ ಸಿಎಂ ಅಗತ್ಯವಿದೆ' ಎಂದರು.

ಒಡಿಶಾದ ಬುಡಕಟ್ಟು ಜನರ ಹೃದಯಭಾಗವಾದ ನಬರಂಗಪುರದಲ್ಲಿ ಮತ್ತೊಂದು ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಸರ್ಕಾರ ಸ್ಥಳೀಯ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಪ್ರತಿಪಾದಿಸಿದರು.
.ಲೋಕಸಭಾ ಚುನಾವಣೆ | ಮೇ 14ಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.