ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಒಡಿಶಾ: ಬಿಜೆಪಿ ಸೇರಿದ ಬಿಜೆಡಿ ಶಾಸಕ ಸಮೀರ್‌ ರಂಜನ್‌ ದಾಸ್‌

Published 19 ಮೇ 2024, 15:59 IST
Last Updated 19 ಮೇ 2024, 15:59 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾದ ನೀಮಪಾರಾ ಕ್ಷೇತ್ರದ ಬಿಜೆಡಿ ಶಾಸಕ ಸಮೀರ್‌ ರಂಜನ್‌ ದಾಸ್‌ ಅವರು ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡರು.

ಬಿಜೆಪಿ ಒಡಿಶಾ ರಾಜ್ಯ ಘಟಕದ ಅಧ್ಯಕ್ಷ ಮನಮೋಹನ್‌ ಸಮಲ್‌, ಪಕ್ಷದ ರಾಜ್ಯ ಉಸ್ತುವಾರಿ ವಿಜಯ್‌ ಪಾಲ್‌ ಸಿಂಗ್‌ ತೋಮರ್‌ ಅವರು ಸಮೀರ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಮೀರ್‌ ಅವರಿಗೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಡಿ ಟಿಕೆಟ್‌ ನಿರಾಕರಿಸಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಬಿಜೆಡಿ ನಾಯಕತ್ವದಲ್ಲಿ ವಿಶ್ವಾಸವಿಲ್ಲದ ಕಾರಣ ಬಿಜೆಪಿಗೆ ಸೇರಿದ್ದೇನೆ ಎಂದು ಸಮೀರ್‌ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT