ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 18 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬುಧವಾರ ತಡ ರಾತ್ರಿ ಬಿಡುಗಡೆ ಮಾಡಿದೆ.

ಬಿಜೆಪಿ 101 ಅಭ್ಯರ್ಥಿಗಳ ಪಟ್ಟಿಯನ್ನು ಮೂರು ಹಂತಗಳಲ್ಲಿ ಬಿಡುಗಡೆ ಮಾಡಿದೆ. ಇದು ಬಿಜೆಪಿಯ ಅಂತಿಮ ಪಟ್ಟಿ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿ ಮೊದಲ ಪಟ್ಟಿಯಲ್ಲಿ 71 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಎರಡನೇ ಪಟ್ಟಿಯಲ್ಲಿ 12 ಹಾಗೂ ಮೂರನೇ ಪಟ್ಟಿಯಲ್ಲಿ 18 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಅಂತಿಮ ಪಟ್ಟಿಯಲ್ಲಿ ಖ್ಯಾತ ಗಾಯಕಿ ಮೈಥಿಲಿ ಠಾಕೂರ್ ಅವರಿಗೆ ಆಲಿನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಬಿಜೆಪಿ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು, 17 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ.

ಜೆಡಿ(ಯು) ಕೂಡ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಉಳಿದಂತೆ ಎಲ್ಜೆಪಿ 29, ಎಚ್ಎಎಂ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್, ಆರ್ಜೆಡಿ ಪಕ್ಷಗಳು ಅಧಿಕೃತವಾಗಿ ಯಾವುದೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.
.ಬಿಹಾರ ಚುನಾವಣೆ: 57 ಕ್ಷೇತ್ರಗಳಿಗೆ ಅಭ್ಯರ್ಥಿ ಪ್ರಕಟಿಸಿದ ಜೆಡಿಯು.ಬಿಹಾರ ಚುನಾವಣೆ:ಸೀಟು ಹಂಚಿಕೆಗೆ ಮುನ್ನವೇ ತೇಜಸ್ವಿ ಮತ್ತಿತರರು ನಾಮಪತ್ರ ಸಲ್ಲಿಕೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.