ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಉಸ್ತುವಾರಿಗಳನ್ನು ನೇಮಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಚುನಾವಣಾ ಉಸ್ತುವಾರಿಯಾಗಿ ರಾಧಾಮೋಹನ್ ದಾಸ್ ಅಗರ್‌ವಾಲ್ ಹಾಗೂ ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.

ಬೈಜಯಂತ್ ಪಾಂಡಾ ಅವರನ್ನು ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಿ ನೇಮಿಸಲಾಗಿದೆ. ಮಹಾರಾಷ್ಟ್ರದ ಬಿಜೆಪಿ ಮುಖಂಡ ವಿನೋದ್ ತಾವ್ಡೆ ಅವರನ್ನು ಬಿಹಾರದ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.