ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವದೆಹಲಿ: ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಬಾನ್ಸುರಿ ಸ್ವರಾಜ್‌ ಕಣ್ಣಿಗೆ ಗಾಯ

Published 10 ಏಪ್ರಿಲ್ 2024, 10:55 IST
Last Updated 10 ಏಪ್ರಿಲ್ 2024, 10:55 IST
ಅಕ್ಷರ ಗಾತ್ರ

ನವದೆಹಲಿ: ಚುನಾವಣಾ ಪ್ರಚಾರದ ವೇಳೆ ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾನ್ಸುರಿ ಸ್ವರಾಜ್‌ ಅವರ ಕಣ್ಣಿಗೆ ಗಾಯವಾಗಿದೆ.

ಪ್ರಚಾರದ ವೇಳೆ ಎಡಗಣ್ಣಿಗೆ ಗಾಯವಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ವೈದ್ಯರ ಬಳಿ ತೆರಳಿ ಒಂದು ಕಣ್ಣಿಗೆ ಬ್ಯಾಂಡೇಜ್‌ ಹಾಕಿಕೊಂಡಿರುವ ಪೋಟೊ ಶೇರ್‌ ಮಾಡಿಕೊಂಡಿರುವ ಬಾನ್ಸುರಿ, ‘ಪ್ರಚಾರದ ವೇಳೆ ಕಣ್ಣಿಗೆ ಸಣ್ಣ ಪ್ರಮಾಣದಲ್ಲಿ ಗಾಯವಾಗಿದೆ, ತಕ್ಷಣ ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ’ ಎಂದು ಬರೆದುಕೊಂಡಿದ್ದಾರೆ. 

ಮಂಗಳವಾರ ಈ ಘಟನೆ ನಡೆದಿದ್ದು, ಇಂದು (ಬುಧವಾರ) ಕಣ್ಣಿಗೆ ಬ್ಯಾಂಡೇಜ್‌ ಹಾಕಿಕೊಂಡೇ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ.

ಆದರೆ ಕಣ್ಣಿಗೆ ಹೇಗೆ ಗಾಯವಾಯಿತು ಎನ್ನುವ ಬಗ್ಗೆ ಮಾಹಿತಿ ಹಂಚಿಕೊಂಡಿಲ್ಲ.

ಮಾಜಿ ವಿದೇಶಾಂಗ ಸಚಿವೆ ದಿವಂಗತ ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌ ಅವರು ಇದೇ ಮೊದಲ ಬಾರಿಗೆ ನವದೆಹಲಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT