ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚ ರಾಜ್ಯಗಳ ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚಿಸಲು BJP ಚುನಾವಣೆ ಸಮಿತಿ ಸಭೆ

Published 16 ಆಗಸ್ಟ್ 2023, 6:21 IST
Last Updated 16 ಆಗಸ್ಟ್ 2023, 6:21 IST
ಅಕ್ಷರ ಗಾತ್ರ

ನವದೆಹಲಿ: ಐದು ರಾಜ್ಯಗಳ ಮುಂಬರುವ ವಿಧಾನಸಭೆ ಚುನಾವಣೆಯ ಬಗ್ಗೆ ಚರ್ಚೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಸಹಿತ ಹಿರಿಯ ನಾಯಕರು ಇರುವ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಇಂದು (ಬುಧವಾರ) ಸಂಜೆ ಸಭೆ ಸೇರಲಿದೆ ಎಂದು ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ.

ಚುನಾವಣಾ ತಯಾರಿ, ಅಭಿಪ್ರಾಯ ಸಂಗ್ರಹ ಹಾಗೂ ಅಭ್ಯರ್ಥಿಗಳ ಆಯ್ಕೆ ಸೇರಿ ಪಕ್ಷದ ಚುನಾವಣಾ ತಂತ್ರಗಾರಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಳಿಸಿವೆ.

ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ರಾಜನಾಥ ಸಿಂಗ್‌ ಹಾಗೂ ಅಮಿತ್‌ ಶಾ ಅವರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಸಾಮಾನ್ಯವಾಗಿ ಚುನಾವಣೆ ಘೋಷಣೆಯಾದ ಬಳಿಕವೇ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ಸೇರುತ್ತಿತ್ತು. ಆದರೆ 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆಯುವ ಪಂಚರಾಜ್ಯಗಳ ಚುನಾವಣೆ ಮಹತ್ವದ್ದಾಗಿದ್ದರಿಂದ ಬೇಗನೇ ಸಭೆ ನಡೆಸಲು ಪಕ್ಷ ತೀರ್ಮಾನಿಸಿದೆ.

ಇದು ರಾಜ್ಯ ಚುನಾವಣಾ ಪ್ರಚಾರದ ಮೇಲ್ವಿಚಾರಣೆಯಲ್ಲಿ ಕೇಂದ್ರ ನಾಯಕತ್ವದ ಹೆಚ್ಚಿನ ಒಳಗೊಳ್ಳುವಿಕೆಯನ್ನು ಸೂಚಿಸುತ್ತದೆ ಎಂದು ಮೂಲಗಳು ಗಮನಿಸಿವೆ.

ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಹಾಗೂ ಮಿಜೋರಾಂನಲ್ಲಿ ಈ ವರ್ಷ ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT