ಕೋಲ್ಕತ್ತ:ಪೌರತ್ವ (ತಿದ್ದುಪಡಿ) ಕಾಯ್ದೆಯಲ್ಲಿ ಮುಸ್ಲಿಮರನ್ನೂ ಯಾಕೆ ಸೇರಿಸಬಾರದು ಎಂದು ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಉಪಾಧ್ಯಕ್ಷಚಂದ್ರ ಕುಮಾರ್ ಬೋಸ್ ಪ್ರಶ್ನಿಸಿದ್ದಾರೆ.

ಕಾಯ್ದೆ ಬೆಂಬಲಿಸಿ ಕೋಲ್ಕತ್ತದಲ್ಲಿ ನಡೆದ ರ್‍ಯಾಲಿಯಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾಗವಹಿಸಿ ಹಿಂತಿರುಗಿದ ಕೆಲವೇ ಗಂಟೆಗಳಲ್ಲಿ ಬೋಸ್ ಈ ಪ್ರಶ್ನೆ ಕೇಳಿದ್ದಾರೆ.

ಇದನ್ನೂ ಓದಿ:Explainer | ಏನಿದು ಪೌರತ್ವ ತಿದ್ದುಪಡಿ ಮಸೂದೆ?

‘2019ರ ಪೌರತ್ವ (ತಿದ್ದುಪಡಿ) ಕಾಯ್ದೆ ಯಾವುದೇ ಧರ್ಮಕ್ಕೆ ಸಂಬಂಧಿಸಿಲ್ಲವೆಂದಾದರೆ; ಹಿಂದು, ಸಿಖ್, ಬೌದ್ಧ, ಕ್ರೈಸ್ತ, ಪಾರ್ಸಿ ಮತ್ತು ಜೈನರಿಗೆ ಮಾತ್ರ ಎಂದು ನಾವು ಯಾಕೆ ಹೇಳುತ್ತಿದ್ದೇವೆ. ಮುಸ್ಲಿಮರನ್ನೂ ಯಾಕೆ ಸೇರಿಸಬಾರದು? ನಾವು ಪಾರದರ್ಶಕವಾಗಿರಬೇಕು’ ಎಂದುಬೋಸ್ ಟ್ವೀಟ್ ಮಾಡಿದ್ದಾರೆ.

‘ಭಾರತವನ್ನು ಬೇರೆ ಯಾವುದೇ ದೇಶಗಳೊಂದಿಗೆ ಹೋಲಿಸಬೇಡಿ ಮತ್ತು ಸಮೀಕರಿಸಿ ನೋಡಬೇಡಿ. ಇದು ಎಲ್ಲ ಧರ್ಮ ಮತ್ತು ಸಮುದಾಯಗಳವರಿಗೆ ಮುಕ್ತವಾಗಿರುವ ರಾಷ್ಟ್ರ’ ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಪೌರತ್ವ ಕಾಯ್ದೆಗೆ ಪಶ್ಚಿಮ ಬಂಗಾಳ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕಚಂದ್ರ ಕುಮಾರ್ ಬೋಸ್ ಸಹ ಕಾಯ್ದೆಯಲ್ಲಿರುವ ಅಂಶದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಇವರುನೇತಾಜಿ ಸುಭಾಷ್‌ಚಂದ್ರ ಬೋಸ್ ಸಂಬಂಧಿಯೂ ಹೌದು.

ಈ ಎಲ್ಲ ಬೆಳವಣಿಗೆಗಳ ಮಧ್ಯೆ, ‘ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ಜಾರಿ ಮಾಡುವುದಿಲ್ಲ’ ಎಂದು ಪಕ್ಷದ ನಾಯಕರು ಸೋಮವಾರ ಹೇಳಿದ್ದರು. ಇದಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ ರೆಡ್ಡಿ ಅವರೂ ದನಿಗೂಡಿಸಿದ್ದರು.

ಇನ್ನಷ್ಟು...

ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಸಿಎಎ, ಎನ್‌ಆರ್‌ಸಿ ಜಾರಿ ಇಲ್ಲ

ಎನ್ಆರ್ಸಿಗೆ ಆಂಧ್ರ ಪ್ರದೇಶದ ಬೆಂಬಲವಿಲ್ಲ: ಜಗನ್ ಮೋಹನ ರೆಡ್ಡಿ ಸ್ಪಷ್ಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.