ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ದೊಡ್ಡ ಬಹುಮತದೊಂದಿಗೆ ಪುನಃ ಸರ್ಕಾರ ರಚಿಸಲಿದೆ ಎಂದು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ 'ಡಬಲ್ ಇಂಜಿನ್' ಸರ್ಕಾರ ಪುನಃ ಅಧಿಕಾರ ಸ್ಥಾಪಿಸಲಿದೆ. ಮುಂದಿನ ಐದು ವರ್ಷಗಳಲ್ಲಿ ಜನರ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಶ್ರದ್ಧೆಯಿಂದ ಕೆಲಸ ಮಾಡಲಿದೆ ಎಂದು ಜೆ.ಪಿ.ನಡ್ಡಾ ತಿಳಿಸಿದರು.

ಗುಜರಾತ್ ವಿಧಾನಸಭೆ ಚುನಾವಣೆಯ ಮತದಾನವು ಡಿಸೆಂಬರ್ 1 ಮತ್ತು 5ರಂದು ಎರಡು ಹಂತದಲ್ಲಿ ನಡೆಯಲಿದೆ. ಡೆಸೆಂಬರ್ 8ರಂದು ಮತ ಎಣಿಕೆ ನಡೆಯಲಿದೆ. ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆಯೂ ಡಿ.8ರಂದೇ ನಡೆಯಲಿದೆ ಎಂದು ಗುರುವಾರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಘೋಷಿಸಿದ್ದಾರೆ.

ಗುಜರಾತ್‌ನಲ್ಲಿ ಒಟ್ಟು 182 ವಿಧಾನಸಭೆ ಸ್ಥಾನಗಳ ಪೈಕಿ ಡಿ.1ಕ್ಕೆ 89 ಸ್ಥಾನಗಳಿಗೆ ಹಾಗೂ ಡಿ.5ಕ್ಕೆ ಉಳಿದ 93 ಸ್ಥಾನಗಳಿಗೆ ಮತದಾನ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.