ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಡಿಎ ಸಭೆಯಲ್ಲಿ ಭಾಗವಹಿಸಲು ಚಿರಾಗ್ ಪಾಸ್ವಾನ್‌ಗೆ ಬಿಜೆಪಿ ಅಧ್ಯಕ್ಷ ನಡ್ಡಾ ಆಹ್ವಾನ

Published 15 ಜುಲೈ 2023, 13:22 IST
Last Updated 15 ಜುಲೈ 2023, 13:22 IST
ಅಕ್ಷರ ಗಾತ್ರ

ನವದೆಹಲಿ: ಜುಲೈ 18ರಂದು ಬಿಜೆಪಿ ನೇತೃತ್ವದಲ್ಲಿ ನಡೆಯಲಿರುವ ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲು ಲೋಕ ಜನಶಕ್ತಿ ಪಕ್ಷದ (ರಾಮ್‌ ವಿಲಾಸ್‌) ನಾಯಕ ಚಿರಾಗ್‌ ಪಾಸ್ವಾನ್‌ ಅವರಿಗೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಆಹ್ವಾನ ನೀಡಿದ್ದಾರೆ.

ಚಿರಾಗ್‌ಗೆ ಪತ್ರ ಬರೆದಿರುವ ನಡ್ಡಾ ಸಭೆಯಲ್ಲಿ ಭಾಗಿಯಾಗಲು ಕೋರಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಒಗ್ಗಟ್ಟಾಗಲು ವಿರೋಧ ಪಕ್ಷಗಳು ಪ್ರಯತ್ನಿಸುತ್ತಿರುವ ನಡುವೆಯೇ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟವು ತನ್ನ ಶಕ್ತಿ ಪ್ರದರ್ಶನಕ್ಕಾಗಿ ಸಭೆ ಹಮ್ಮಿಕೊಂಡಿದೆ.

ಪ್ರಾದೇಶಿಕ ಪಕ್ಷಗಳು ಎನ್‌ಡಿಎದಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದು ಪತ್ರದಲ್ಲಿ ಬಣ್ಣಿಸಿರುವ ನಡ್ಡಾ ಅವರು, ಈ ಪಕ್ಷಗಳು ಅಭಿವೃದ್ಧಿ ಮತ್ತು ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಪ್ರಮುಖ ಪಾಲುದಾರರಾಗಿವೆ ಎಂದಿದ್ದಾರೆ.

2020ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್ ವಿರುದ್ಧ ಸಿಡಿದೆದ್ದಿದ್ದ ಚಿರಾಗ್‌, ಜೆಡಿಯು ಜತೆಗಿನ ಮೈತ್ರಿ ಕಡಿದುಕೊಂಡಿದ್ದರು. ನಂತರದ ರಾಜಕೀಯ ಬೆಳವಣಿಗೆಯಲ್ಲಿ ನಿತೀಶ್‌ ಕುಮಾರ್ ಬಿಜೆಪಿ ವಿರುದ್ಧ ಮುನಿಸಿಕೊಂಡು ಮೈತ್ರಿ ಮುರಿದುಕೊಂಡಿದ್ದರು. ಬಳಿಕ ಆರ್‌ಜೆಡಿ ಜತೆ ಸೇರಿಕೊಂಡು ಸರ್ಕಾರ ರಚಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಬಿಜೆಪಿ ಈಗ ಚಿರಾಗ್‌ ಪಾಸ್ವಾನ್‌ ಅವರನ್ನು ಎನ್‌ಡಿಎ ತೆಕ್ಕೆಗೆ ಮರಳಿ ತರುವ ಪ್ರಯತ್ನ ಮಾಡುತ್ತಿದೆ.

ಎನ್‌ಡಿಎ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣ, ಬಿಹಾರ ಮತ್ತು ಉತ್ತರ ಪ್ರದೇಶದ ಹಲವಾರು ಸಣ್ಣ ಪಕ್ಷಗಳು ಹಾಗೂ ಈಶಾನ್ಯ ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಸೇರಿದಂತೆ ಹಲವಾರು ಹೊಸ ಮಿತ್ರಪಕ್ಷಗಳು ಭಾಗವಹಿಸುವ ನೀರಿಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT