ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಸಿಗದಿರಲು BJPಯಿಂದ ಉದ್ದೇಶಪೂರ್ವಕ ಪಶ್ನೆ ಪತ್ರಿಕೆ ಸೋರಿಕೆ: ಅಖಿಲೇಶ್

Published 27 ಏಪ್ರಿಲ್ 2024, 12:54 IST
Last Updated 27 ಏಪ್ರಿಲ್ 2024, 12:54 IST
ಅಕ್ಷರ ಗಾತ್ರ

ಕನೌಜ್(ಉತ್ತರ ಪ್ರದೇಶ): ಯೋಗಿ ಆದಿತ್ಯನಾಥ್‌ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ‘ಯುವಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರಯೋಜನವನ್ನು ನಿರಾಕರಿಸುವ ಉದ್ದೇಶದಿಂದ ಸರ್ಕಾರಿ ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ’ ಎಂದು ಆರೋಪಿಸಿದ್ದಾರೆ.

ರಸೂಲಾಬಾದ್‌ನಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, ‘ಉದ್ಯೋಗ ನೀಡಬೇಕಾದರೆ, ಮೀಸಲಾತಿಯನ್ನೂ ನೀಡಬೇಕು’ ಎಂದರು.

‘ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ 10 ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ, ಮೀಸಲಾತಿ ನೀಡುವ ಅಗತ್ಯವೂ ಇರುವುದಿಲ್ಲ. ಸಮಾಜವಾದಿ ಪಕ್ಷ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ನೇಮಕಾತಿ ಪ್ರಕ್ರಿಯೆಗಳು ಪಾರದರ್ಶಕ ಮತ್ತು ನ್ಯಾಯಯುತವಾಗಿದ್ದವು’ ಎಂದರು.

‘ಪ್ರಣಾಳಿಕೆಯಲ್ಲಿ ನೀಡಿದ ಯಾವುದೇ ಭರವಸೆಯನ್ನು ಬಿಜೆಪಿ ಈಡೇರಿಸಿಲ್ಲ. ರೈತರ ಆದಾಯ ದುಪ್ಪಟ್ಟಾಗಿಲ್ಲ. ಹಣದುಬ್ಬರ ದೇಶದ ದೊಡ್ಡ ಸಮಸ್ಯೆಯಾಗಿದೆ. ಯುವಕರು, ಕೈಗಾರಿಕೋದ್ಯಮಿಗಳೂ ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಸಂವಿಧಾನ ಉಳಿಸಲು ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT