ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಗುರಿಯಾಗಿಸಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಖರ್ಗೆ, ರಾಮನಾಥ ಕೋವಿಂದ್ ಅವರ ಹೆಸರನ್ನು ಕೋವಿಡ್ ಎಂದು ಹಾಗೂ ದ್ರೌಪದಿ ಮುರ್ಮು ಅವರ ಹೆಸರನ್ನು ಮುರ್ಮಾ ಎಂದು ಹೇಳಿದ್ದಾರೆ. ಈ ಮೂಲಕ ಅವರನ್ನು ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
.ನಟ ರಿಷಬ್ ಶೆಟ್ಟಿ ಜನ್ಮದಿನಕ್ಕೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಪತ್ನಿ ಪ್ರಗತಿ.ಏರ್ ಇಂಡಿಯಾ ದುರಂತ: ವಿಮಾನಯಾನ ಸಚಿವಾಲಯಕ್ಕೆ ಪ್ರಾಥಮಿಕ ವರದಿ ಸಲ್ಲಿಸಿದ AAIB.
ಹೆಸರುಗಳನ್ನು ತಪ್ಪಾಗಿ ಉಚ್ಚರಿಸಿದ್ದಲ್ಲದೇ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರಕ್ಕೆ ಬಂದಿರುವುದರ ಹಿಂದಿನ ಬಿಜೆಪಿ ಪಕ್ಷದ ಉದ್ದೇಶ ನಮ್ಮ ಕಾಡುಗಳನ್ನು, ಆಸ್ತಿಗಳನ್ನು, ಭೂಮಿಗಳನ್ನು ಕಸಿದುಕೊಳ್ಳುವ ಹುನ್ನಾರ ಮಾಡಿದೆಯೇ ಎಂದು ಖರ್ಗೆ ಆರೋಪಿಸಿರುವುದಾಗಿ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಹೇಳಿದ್ದಾರೆ.

ಇದರಿಂದ ಕಾಂಗ್ರೆಸ್ ಪಕ್ಷದ 'ದಲಿತ ವಿರೋಧಿ, ಆದಿವಾಸಿ ವಿರೋಧಿ ಮತ್ತು ಸಂವಿಧಾನ ವಿರೋಧಿ' ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಭಾಟಿಯಾ ಆರೋಪಿಸಿದ್ದಾರೆ.

ಖರ್ಗೆ ಹೇಳಿಕೆಯು ಆದಿವಾಸಿ ಮತ್ತು ದಲಿತ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ. ಕಾಂಗ್ರೆಸ್ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲವೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕೆಂದು ಭಾಟಿಯಾ ಒತ್ತಾಯಿಸಿದ್ದಾರೆ.
.ಭಾರತ-ಪಾಕ್ ಸಂಘರ್ಷ ಶಮನ; ಟ್ರಂಪ್ ಹೇಳಿಕೆಗೆ ಪ್ರಧಾನಿ ಮೌನ ಪ್ರಶ್ನಿಸಿದ ಕಾಂಗ್ರೆಸ್.ಸಿದ್ದರಾಮಯ್ಯನವರೇ, ಅನ್ನಭಾಗ್ಯಕ್ಕೆ ಏಕೆ ಭಂಗತಂದಿದ್ದೀರಿ?: ಬಿಜೆಪಿ.PHOTOS | Wimbledon 2025: ಸೆಂಟರ್ ಕೋರ್ಟ್ನಲ್ಲಿ ತಾರೆಯರ ಮೆರಗು.ತೆಲಂಗಾಣದಲ್ಲಿ ವಿಶ್ವದರ್ಜೆಯ Film Studio: ಸಿಎಂ ರೇವಂತ್ ಭೇಟಿಯಾದ ಅಜಯ್ ದೇವಗನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.