ನವದೆಹಲಿ: ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ನ ‘ಬಹಿರಂಗ ಸುಲಿಗೆ’ಯು ಗುತ್ತಿಗೆದಾರರೊಬ್ಬರ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಬಿಜೆಪಿ ಶನಿವಾರ ಆರೋಪಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಸಿದ್ದರಾಮಯ್ಯ ಸರ್ಕಾರ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಸಾಬೀತಾಗಿದೆ ಎಂದು ಬಿಜೆಪಿ ನಾಯಕ ಜಿವಿಎಲ್ ನರಸಿಂಹರಾವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗುತ್ತಿಗೆದಾರ ಸಚಿನ್ ಪಾಂಚಾಳ್ ಅವರ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ನಿಕಟವರ್ತಿ, ಸುಲಿಗೆಕೋರ ರಾಜು ಕಾಪನೂರ ಕಾರಣವಾಗಿರುವ ಆರೋಪ ಇದೆ. ಪ್ರಿಯಾಂಕ್ ಖರ್ಗೆ ಅಧಿಕಾರದಲ್ಲಿದ್ದರೆ, ಕಪನೂರ ಅವರನ್ನು ರಕ್ಷಿಸುವ ಪ್ರಯತ್ನಗಳು ನಿಸ್ಸಂದೇಹವಾಗಿ ನಡೆಯುತ್ತವೆ. ಹಾಗಾಗಿ, ಪ್ರಿಯಾಂಕ್ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.