ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌ನಲ್ಲಿ BJP ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಕೆಲಸಗಳಾಗಿಲ್ಲ: ಚಂಪೈ ಕಿಡಿ

Published 19 ಫೆಬ್ರುವರಿ 2024, 14:53 IST
Last Updated 19 ಫೆಬ್ರುವರಿ 2024, 14:53 IST
ಅಕ್ಷರ ಗಾತ್ರ

ಹಜಾರಿಬಾಗ್‌ (ಜಾರ್ಖಂಡ್‌): ‘ಬಿಜೆಪಿಯು ರಾಜ್ಯದಲ್ಲಿ ಅಧಿಕಾರದಲ್ಲಿದ್ದ ವೇಳೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ಯಾವುದೇ ಕೆಲಸ ಮಾಡಿಲ್ಲ’ ಎಂದು ಜಾರ್ಖಂಡ್‌ ಮುಖ್ಯಮಂತ್ರಿ ಚಂಪೈ ಸೊರೇನ್‌ ಅವರು ಸೋಮವಾರ ಹೇಳಿದ್ದಾರೆ.

ಹಜಾರಿಬಾಗ್‌ನ ವಿನೋಬಾ ಭಾವೆ ವಿಶ್ವವಿದ್ಯಾಲಯ ಆವರಣದಲ್ಲಿ ರಾಜ್ಯ ಸರ್ಕಾರದ ವಸತಿ ಯೋಜನೆಯಾದ ‘ಅಬು ಆವಾಸ್‌’ ಅಡಿ ಫಲಾನುಭವಿಗಳಿಗೆ ಅನುಮೋದನೆ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ‘2019ರಲ್ಲಿ ಹೇಮಂತ್ ಸೊರೇನ್‌ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ, ಅದು ಮೂಲಸೌಕರ್ಯ (ಊಟ, ಬಟ್ಟೆ ಮತ್ತು ವಸತಿ) ಹಾಗೂ ಶೈಕ್ಷಣಿಕ ಅಭಿವೃದ್ಧಿಯೆಡೆಗೆ ತನ್ನ ಗಮನವನ್ನು ಕೇಂದ್ರೀಕರಿಸಿತು’ ಎಂದರು.

‘ಹಿಂದಿನ ಹೇಮಂತ್‌ ಸೊರೇನ್‌ ನೇತೃತ್ವದ ಸರ್ಕಾರವು ರಾಜ್ಯದ ಜನರಿಗೆ ಮನೆಗಳನ್ನು ಒದಗಿಸುವಂತೆ ಪದೇ ಪದೇ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿತು. ಮನೆಗಳನ್ನು ಒದಗಿಸಲು ಕೇಂದ್ರವು ನಿರಾಕರಿಸಿದಾಗ ರಾಜ್ಯದ ಹಣದಿಂದಲೇ ಜನರಿಗೆ ಮನೆಗಳನ್ನು ಒದಗಿಸಲು ಹೇಮಂತ್‌ ಅವರು ನಿರ್ಧರಿಸಿದರು. 2027ರಷ್ಟೊತ್ತಿಗೆ ರಾಜ್ಯದ ಯಾವುದೇ ಬಡವನೂ ವಸತಿರಹಿತನಾಗಿರಬಾರದು’ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಹಜಾರಿಬಾಗ್‌, ರಾಮಗಢ, ಕೊಡೆರ್ಮಾ ಹಾಗೂ ಚತ್ರಾ ಜಿಲ್ಲೆಯ ಫಲಾನುಭವಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT