ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಗೆ ಸೋಲುವ ಭಯದಿಂದಾಗಿ ವಿಧಾನಸಭೆ ಚುನಾವಣೆ ನಡೆಸುತ್ತಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.

ನಿಕಟ ಭವಿಷ್ಯದಲ್ಲಿ ಜಮ್ಮುವಿನಲ್ಲಿ ಚುನಾವಣೆ ನಡೆಯುವ ಬಗ್ಗೆ ನಿರೀಕ್ಷೆಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಒಮರ್ ಹೇಳಿದ್ದಾರೆ.

ಅನಂತನಾಗ್ ಜಿಲ್ಲೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭಯ ಇದೆ. ಜನರನ್ನು ಎದುರಿಸುವ ಧೈರ್ಯವಿಲ್ಲ. ನಾವು ಕೂಡ ಚುನಾವಣೆಗಾಗಿ ಭಿಕ್ಷೆ ಬೇಡಲು ಸಿದ್ಧರಿಲ್ಲ. ಅವರು ಚುನಾವಣೆ ಆಯೋಜಿಸಿದರೆ ಉತ್ತಮ ಎಂದು ತಿಳಿಸಿದ್ದಾರೆ.

ಜಮ್ಮುವಿನಲ್ಲಿ ಚುನಾವಣೆ ಆಯೋಜಿಸಲು ಚುನಾವಣಾ ಆಯೋಗಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಹಸಿರು ನಿಶಾನೆ ನೀಡಿಲ್ಲ. ಹಾಗಾಗಿ ರಾಜ್ಯದಲ್ಲಿ ಚುನಾವಣೆ ನಡೆಯುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.