ಲಖನೌ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಭಾನುವಾರ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದು ಆ ಪಕ್ಷವು ‘ಚುನಾವಣಾ ಭ್ರಷ್ಟಾಚಾರದ ವಿಶ್ವವಿದ್ಯಾಲಯ’ ಎಂದು ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಂತ್ಯಗಾಣಿಸಲು ಬಿಜೆಪಿಯು ಹಕ್ಕುಗಳ ನಿರಾಕರಣೆ ಮತ್ತು ಮತದಾರರ ಪಟ್ಟಿಯಲ್ಲಿ ವಂಚನೆ ಎಸಗುವುದರಲ್ಲಿ ತನ್ನನ್ನು ತೊಡಗಿಸಿಕೊಂಡಿದೆ ಎಂದು ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಟೀಕಿಸಿದ್ದಾರೆ.

‘ಪ್ರಜಾಪ್ರಭುತ್ವವನ್ನು ನಾಶಮಾಡಲು ಬಿಜೆಪಿ ರೂಪಿಸುತ್ತಿರುವ ಪಿತೂರಿ ಯಶಸ್ವಿಯಾಗಲು ನಾವು ಬಿಡುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅಲ್ಲಿನ ಜನರು ಆ ಪಕ್ಷದ ಕಾರ್ಯವಿಧಾನವನ್ನು ಅರ್ಥಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
.ಚುನಾವಣಾ ಬಾಂಡ್ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ.ಚುನಾವಣಾ ಬಾಂಡ್ ಮೂಲಕ ರಾಜಕೀಯ ಭ್ರಷ್ಟಾಚಾರ: ಪ್ರಕಾಶ್ ರಾಜ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.