ನವದೆಹಲಿ: ಈ ವರ್ಷ ಹಾಗೂ ಮುಂದಿನ ವರ್ಷ ಚುನಾವಣೆ ನಡೆಯಲಿರುವ ಮೂರು ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು ಬಿಜೆಪಿ ಗುರುವಾರ ನೇಮಿಸಿದೆ. ಬಿಹಾರದ ಹೊಣೆಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ವಹಿಸಲಾಗಿದೆ.

ಗುಜರಾತ್ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರೂ ಆಗಿರುವ ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಮತ್ತು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಸಹ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ.

ಬಿಹಾರ ವಿಧಾನಸಭೆಗೆ ನವೆಂಬರ್ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

ಇನ್ನು, ಮುಂದಿನ ವರ್ಷ ಚುನಾವಣೆ ನಡೆಯಲಿರುವ ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೂ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.

ತಮಿಳುನಾಡು ಉಸ್ತುವಾರಿ ಜವಾಬ್ದಾರಿಯನ್ನು ಬೈಜಯಂತ್ ಪಾಂಡಾ, ಸಹ ಉಸ್ತುವಾರಿ ಹೊಣೆಯನ್ನು ಕೇಂದ್ರ ಸಚಿವ ಮುರಳೀಧರ್ ಮೊಹೋಲ್ ಅವರಿಗೆ ವಹಿಸಲಾಗಿದೆ. ಪಶ್ಚಿಮ ಬಂಗಾಳದ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಭೂಪೇಂದ್ರ ಯಾದವ್, ಸಹ ಉಸ್ತುವಾರಿಯಾಗಿ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ನೇಮಕಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.