ಪಟ್ನಾ: ಇತ್ತೀಚಿನ ಟಿ.ವಿ ಸಂದರ್ಶನವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ಎಸ್ಎಸ್ ಅನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ವಿರುದ್ಧ ಬಿಜೆಪಿ ಭಾನುವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಬಿಹಾರದ ಬಿಜೆಪಿ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್ ನೇತೃತ್ವದ ನಿಯೋಗವು ಕೊತ್ವಾಲಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದೆ.

ಕುಮಾರ್ ಅವರ ಹೇಳಿಕೆಗಳ ಕುರಿತು ಎಫ್ಐಆರ್ ದಾಖಲಿಸುವಂತೆ ಇಕ್ಬಾಲ್ ಪೊಲೀಸರನ್ನು ಒತ್ತಾಯಿಸಿದ್ದಾರೆ.

‘ತುಕ್ಡೆ ತುಕ್ಡೆ ಗ್ಯಾಂಗ್'ನ ಭಾಗವಾಗಿರುವ ಕನ್ಹಯ್ಯ ಕುಮಾರ್ ಏಪ್ರಿಲ್ 11ರಂದು ಟಿ.ವಿ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ ಮತ್ತು ಆರ್ಎಸ್ಎಸ್ ಹಾಗೂ ಅದರ ಸಿದ್ಧಾಂತಗಳ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವರು ಸಂದರ್ಶನದಲ್ಲಿ ಬಳಸಿದ ಭಾಷೆ ಅತ್ಯಂತ ಆಕ್ಷೇಪಾರ್ಹ ಮತ್ತು ಸ್ವೀಕಾರಾರ್ಹವಲ್ಲ’ಎಂದು ಇಕ್ಬಾಲ್ ಹೇಳಿದ್ದಾರೆ.

‘ನಾವು ಅವರ ವಿರುದ್ಧ ತಕ್ಷಣ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ದೂರು ನೀಡಿದ್ದೇವೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.