ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಬಿಜೆಪಿ ಸರ್ಕಾರವು ಜನರ ಹಣವನ್ನು ಲೂಟಿ ಮಾಡುತ್ತಿದೆ: ಕಾಂಗ್ರೆಸ್‌ ಆರೋಪ

Published 30 ಜುಲೈ 2023, 11:50 IST
Last Updated 30 ಜುಲೈ 2023, 11:50 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ಜನರಿಂದ ಹಣವನ್ನೂ ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್‌ ಭಾನುವಾರ ಆರೋಪಿಸಿದೆ.

ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆಯಿಂದಾಗಿ ದೇಶದ ಜನರು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ‘ಕಚ್ಚಾ ತೈಲದ ಬೆಲೆ ಕಡಿಮೆ ಇದ್ದರೂ, ಮೋದಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಧಿಕ ತೆರಿಗೆ ವಿಧಿಸುವ ಮೂಲಕ ಜನರಿಂದ ಈವರೆಗೂ ₹32 ಲಕ್ಷ ಕೋಟಿ ಲೂಟಿ ಮಾಡಿದೆ‘ ಎಂದು ಕಾಂಗ್ರೆಸ್‌ ವಕ್ತಾರ ಜೈರಾಮ್ ರಮೇಶ್ ಹೇಳಿದ್ದಾರೆ

ಕೇಂದ್ರ ಸರ್ಕಾರ ಲಾಭ ಗಳಿಸುವುದಷ್ಟೇ ಅಲ್ಲ, ಬಂಡವಾಳಶಾಹಿ ಮಿತ್ರರಿಗೆ ಲೂಟಿ ಮಾಡಲು ವಿನಾಯಿತಿ ಸಹ ನೀಡಿದೆ. ಕಳೆದ 9 ವರ್ಷಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಹೆಚ್ಚಿಸುತ್ತಲೇ ಬಂದಿದೆ. ಈಗಿರುವ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಬೆಲೆಯನ್ನು ಶೇಕಡಾ 35ರಷ್ಟು ಕಡಿಮೆ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ರಮೇಶ್ ತಿಳಿಸಿದ್ದಾರೆ

ಬೆಲೆ ಏರಿಕೆ ಸಮಸ್ಯೆಯನ್ನು ಬಗೆಹರಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT