ವಿಜಯವಾಡ: ಆಂಧ್ರಪ್ರದೇಶದ ಕೌಶಲ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ಬಂಧನದಲ್ಲಿ ಬಿಜೆಪಿಯ ಪಾತ್ರ ಇಲ್ಲ ಎಂದು ಆಂಧ್ರ ಬಿಜೆಪಿ ಘಟಕದ ಅಧ್ಯಕ್ಷೆ ಪುರಂದರೇಶ್ವರಿ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಚಂದ್ರಬಾಬು ನಾಯ್ಡು ಬಂಧನದ ವಿಚಾರದಲ್ಲಿ ಬಿಜೆಪಿಯ ಕೈವಾಡವಿದೆ ಎಂದು ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಮಾಡಲಾಗುತ್ತಿದೆ ಆದರೆ ಬಿಜೆಪಿ ಯಾವುದೇ ಪಾತ್ರವಹಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಚಂದ್ರಬಾಬು ನಾಯ್ಡು ಅವರ ಆರೋಗ್ಯ ವಿಚಾರಿಸಿ, ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಕಳೆದ ರಾತ್ರಿ ತೆಲಂಗಾಣ ಬಿಜೆಪಿ ಮುಖ್ಯಸ್ಥ ಕಿಶನ್ ರೆಡ್ಡಿ ಹಾಗೂ ಪುರಂದರೇಶ್ವರಿ ಅವರು ನಾರಾ ಲೋಕೇಶ್ ಜೊತೆ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.