ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

BJP ಸಿದ್ಧಾಂತ ಆಧಾರಿತ ಪಕ್ಷ; ಇಲ್ಲಿ ಕಾರ್ಯಕರ್ತರ ಪಾತ್ರವೇ ನಿರ್ಣಾಯಕ: BL ಸಂತೋಷ್

Published : 26 ಸೆಪ್ಟೆಂಬರ್ 2024, 16:05 IST
Last Updated : 26 ಸೆಪ್ಟೆಂಬರ್ 2024, 16:05 IST
ಫಾಲೋ ಮಾಡಿ
Comments

ಜೈಪುರ: ‘ಬಿಜೆಪಿಯು ಸಿದ್ಧಾಂತ ಆಧಾರಿತ ಪಕ್ಷವಾಗಿದ್ದು, ಇಲ್ಲಿ ಕಾರ್ಯಕರ್ತರೇ ನಿರ್ಣಾಯಕ ಪಾತ್ರ ವಹಿಸುತ್ತಾರೆ’ ಎಂದು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಗುರುವಾರ ಹೇಳಿದ್ದಾರೆ.

ರಾಜಸ್ಥಾನದ ಜೈಪುರದಲ್ಲಿ ಆಯೋಜಿಸಲಾಗಿದ್ದ ಪಕ್ಷದ ಸದಸ್ಯತ್ವ ಅಭಿಯಾನವನ್ನು ಪರಿಶೀಲಿಸಿ ಮಾತನಾಡಿದ ಅವರು, ‘ಸದಸ್ಯತ್ವ ಅಭಿಯಾನದಲ್ಲಿ ಕಾರ್ಯಕರ್ತರು ಗಂಭೀರವಾಗಿ ತೊಡಗಿಸಿಕೊಳ್ಳುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.

ಪಕ್ಷದ ರಾಜಸ್ಥಾನ ಘಟಕದ ಅಧ್ಯಕ್ಷ ಮದನ್ ರಾಥೋಡ್ ಮಾತನಾಡಿ, ‘ವಿರೋಧ ಪಕ್ಷಗಳು ಸುಳ್ಳು ಹರಡುತ್ತಾ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿವೆ. ವಿದೇಶಿ ನೆಲದಲ್ಲಿ ದೇಶದ ಪ್ರತಿಷ್ಠೆಗೆ ಕಳಂಕ ತರುತ್ತಿದ್ದಾರೆ. ಹಿಂದೂಗಳು ಹಿಂಸಾಪ್ರವೃತ್ತಿವುಳ್ಳವರು ಎಂದು ರಾಹುಲ್ ಗಾಂಧಿ ಸಂಸತ್‌ನಲ್ಲಿ ಹೇಳಿದ್ದಾರೆ. ಇಷ್ಟು ಮಾತ್ರವಲ್ಲ, ದೇಶದ ಸೌಹಾರ್ದತೆ ಕದಡುವ ಕೆಲಸವನ್ನು ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು 140 ಕೋಟಿ ಭಾರತೀಯರನ್ನು ತಮ್ಮ ಕುಟುಂಬದವರೆಂದು ಪರಿಗಣಿಸಿದ್ದಾರೆ. ದೇಶದ ಏಕತೆ, ಸಮಗ್ರತೆ ಹಾಗೂ ಸಂಸ್ಕೃತಿಯನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಮೀಸಲಾತಿ ರಕ್ಷಣೆಗೆ ಬಿಜೆಪಿ ಬದ್ಧವಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT