ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಚುನಾವಣೆ: ಬಿಜೆಪಿ ನಿರ್ವಹಣಾ ತಂಡ ಪ್ರಕಟ, ಸಿ.ಟಿ.ರವಿಗೆ ಸ್ಥಾನ

ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ 14 ಮಂದಿ ಪ್ರಮುಖ ನಾಯಕರನ್ನು ಒಳಗೊಂಡಿರುವ ನಿರ್ವಹಣಾ ತಂಡವನ್ನು ಶುಕ್ರವಾರ ಪ್ರಕಟಿಸಿದೆ.

ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಜಿ. ಕಿಶನ್ ರೆಡ್ಡಿ, ಅಶ್ವಿನಿ ವೈಷ್ಣವ್, ಸರ್ಬಾನಂದ ಸೋನೋವಾಲ್‌, ಅರ್ಜುನ್ ರಾಮ್ ಮೇಘವಾಲ್ ಮತ್ತು ಭಾರತಿ ಪವಾರ್,ಸಿ.ಟಿ.ರವಿ, ವಿನೋದ್ ತಾವ್ಡೆ, ತರುಣ್ ಚೌಗ್, ಡಿ.ಕೆ.ಆರುಣಾ, ಋತುರಾಜ್‌ ಸಿನ್ಹಾ, ವಾನತಿ ಶ್ರೀನಿವಾಸನ್, ಸಂಬಿತ್ ಪಾತ್ರಾ, ರಾಜ್‌ದೀಪ್ ರಾಯ್ ಅವರು ನಿರ್ವಹಣಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಯಲಿದ್ದು, ಮತಗಳ ಎಣಿಕೆ ಪ್ರಕ್ರಿಯೆ ರಾಷ್ಟ್ರ ರಾಜಧಾನಿಯಲ್ಲಿ ಜುಲೈ 21ರಂದು ನಡೆಯಲಿದೆ. ರಾಜಕೀಯ ಪಕ್ಷಗಳು ಈ ಚುನಾವಣೆಯಲ್ಲಿ ತನ್ನ ಸದಸ್ಯರಿಗೆ ವಿಪ್‌ ಜಾರಿ ಮಾಡಲು ಅವಕಾಶ ಇರುವುದಿಲ್ಲ.

ರಾಷ್ಟ್ರಪತಿ ಚುನಾವಣೆಯಲ್ಲಿ ಸಂಸತ್ತಿನ ಉಭಯ ಸದನಗಳ ಸದಸ್ಯರು, ರಾಜ್ಯಗಳ ವಿಧಾನಸಭೆ ಹಾಗೂ ದೆಹಲಿ, ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳ ಚುನಾಯಿತ ಸದಸ್ಯರು ಮತದಾರರಾಗಿರುತ್ತಾರೆ. ಸಂಸತ್ತಿನ ಉಭಯ ಸದನಗಳಿಗೆ ನಾಮಕರಣಗೊಂಡ ಹಾಗೂ ರಾಜ್ಯಗಳ ವಿಧಾನಪರಿಷತ್ತುಗಳ ಸದಸ್ಯರಿಗೆ ಮತದಾನದ ಹಕ್ಕು ಇರುವುದಿಲ್ಲ.

ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳಿಂದ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕುರಿತು ಚರ್ಚಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿ ಇತ್ತೀಚೆಗೆ ಬಿಜೆಪಿಯೇತರ ಪಕ್ಷಗಳ ನಾಯಕರ ಸಭೆ ಕರೆದಿದ್ದರು.

ಈ ಸಭೆಯಲ್ಲಿ 17 ವಿರೋಧ ಪಕ್ಷಗಳು ಭಾಗವಹಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT