ಪಟ್ನಾ: ಬಿಜೆಪಿ ಜತೆಗಿನ ಮೈತ್ರಿ ಬಿಹಾರಕ್ಕೆ ಸೀಮಿತ ಎಂದು ಜೆಡಿಯು ಸ್ಪಷ್ಟಪಡಿಸಿದೆ. ಜಾರ್ಖಂಡ್, ಉತ್ತರ ಪ್ರದೇಶ, ಕರ್ನಾಟಕ, ರಾಜಸ್ಥಾನ, ಛತ್ತೀಸಗಡ, ಲಕ್ಷದ್ವೀಪ, ಅಸ್ಸಾಂ ಮತ್ತು ನಾಗಾಲ್ಯಾಂಡ್‌ನ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಜೆಡಿಯು ನಿರ್ಧರಿಸಿದೆ.

ಪಟ್ನಾದಲ್ಲಿ ನಡೆದ ಜೆಡಿಯುನ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ:ಬಿಜೆಪಿ–ಕಾಂಗ್ರೆಸ್ ಅಪವಿತ್ರ ಮೈತ್ರಿ: ಕೇಜ್ರಿವಾಲ್ ಆಕ್ರೋಶ

ಜೆಡಿಯು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯಬೇಕು ಎಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ. ಚುನಾವಣಾ ಆಯೋಗದ ಮಾನದಂಡಗಳ ಪ್ರಕಾರ, ನಾಲ್ಕು ರಾಜ್ಯಗಳಲ್ಲಿ ಕನಿಷ್ಠ ಶೇ 6ರಷ್ಟು ಮತ ಪಡೆದ ಅಥವಾ ಕನಿಷ್ಠ ಮೂರು ರಾಜ್ಯಗಳಲ್ಲಿನ ಒಟ್ಟು ಲೋಕಸಭಾ ಕ್ಷೇತ್ರಗಳಲ್ಲಿ ಶೇ 2ರಷ್ಟರಲ್ಲಿ ಜಯಗಳಿಸಿದ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಲಾಗುತ್ತದೆ. ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ರಾಜ್ಯ ಮಟ್ಟದ ಪಕ್ಷವೆಂಬ ಮಾನ್ಯತೆ ಪಡೆದರೂ ರಾಷ್ಟ್ರೀಯ ಪಕ್ಷದ ಮಾನ್ಯತೆ ದೊರೆಯುತ್ತದೆ.

ಇವುಗಳನ್ನೂ ಓದಿ:

ಡಿಎಂಕೆ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮ

ದೆಹಲಿಯಲ್ಲಿ ಎಎಪಿ ಜತೆಗಿಲ್ಲ ಕಾಂಗ್ರೆಸ್ ಮೈತ್ರಿ: ಶೀಲಾ ದೀಕ್ಷಿತ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.