ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ರಾಧಾಮೋಹನ್‍ದಾಸ್ ಅಗರವಾಲ್ ನೇಮಕ

Published 5 ಜುಲೈ 2024, 15:53 IST
Last Updated 5 ಜುಲೈ 2024, 15:53 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ರಾಜ್ಯ ಘಟಕದ ಉಸ್ತುವಾರಿಯಾಗಿ ಸಂಸದ ರಾಧಾಮೋಹನ್‍ದಾಸ್ ಅಗರವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಶುಕ್ರವಾರ ನೇಮಿಸಿದ್ದಾರೆ. 

ಈವರೆಗೆ ಅರುಣ್ ಸಿಂಗ್ ಅವರು ರಾಜ್ಯ ಉಸ್ತುವಾರಿಯಾಗಿದ್ದರು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಗರವಾಲ್ ಅವರು ರಾಜ್ಯದಲ್ಲಿ ಚುನಾವಣಾ ಉಸ್ತುವಾರಿ ಆಗಿದ್ದರು. 

23 ರಾಜ್ಯಗಳು ಹಾಗೂ ಈಶಾನ್ಯ ರಾಜ್ಯಗಳಿಗೆ ಉಸ್ತುವಾರಿಗಳು ಹಾಗೂ ಸಹ ಉಸ್ತುವಾರಿಗಳನ್ನು ನೇಮಿಸಲಾಗಿದೆ. ಪುದುಚೇರಿಯ ಉಸ್ತುವಾರಿ ಹೊಣೆಯನ್ನು ಕರ್ನಾಟಕದ ನಿರ್ಮಲ್ ಕುಮಾರ್ ಸುರಾನಾ ಅವರಿಗೆ ವಹಿಸಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾದ ಬೆನ್ನಲ್ಲೇ ರಾಜ್ಯ ಉಸ್ತುವಾರಿಗಳನ್ನು ಬದಲಾಯಿಸಲಾಗಿದೆ. 
ರಾಧಾಮೋಹನ್‍ದಾಸ್ ಮಾರ್ಗದರ್ಶನದಲ್ಲಿ ಪಕ್ಷವು ರಾಜ್ಯದಲ್ಲಿ 17 ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 
ಅವರ ಮಾರ್ಗದರ್ಶನವು ಕರ್ನಾಟಕದಲ್ಲಿ ಪಕ್ಷದ ಸಂಘಟನೆಯಲ್ಲಿ ಧನಾತ್ಮಕ ಬದಲಾವಣೆಗಳಿಗೆ ಕಾರಣವಾಗಲಿದೆ ಮತ್ತು ಮುಂದಿನ ಉಪ ಚುನಾವಣೆಗಳು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವನ್ನು ತಂದು ಕೊಡಲಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT