ಶಿಮ್ಲಾ: ವೈದ್ಯಕೀಯ ಪರೀಕ್ಷೆ ನೆಪದಲ್ಲಿ ಇಪ್ಪತ್ತೈದು ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಿಮಾಚಲ ಪ್ರದೇಶ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಸಹೋದರ, ಆಯುರ್ವೇದ ವೈದ್ಯ ರಾಮ್ ಕುಮಾರ್ ಬಿಂದಾಲ್ ಅವರನ್ನು ಶುಕ್ರವಾರ ಬಂಧಿಸಲಾಗಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ರಾಜೀವ್ ಬಿಂದಾಲ್ ಅವರ ಹಿರಿಯ ಸಹೋದರ ರಾಮ್ ಕುಮಾರ್ ಅವರು ಅ. 7ರಂದು ಮಹಿಳೆ ಮೇಲೆ ದೌರ್ಜನ್ಯ ಎಸಗಿದ್ದು, ಸೋಲನ್ನಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತೆಯು ಅ. 8ರಂದು ಸೋಲನ್ನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ಕುರಿತಂತೆ ಹೆಚ್ಚಿನ ತನಿಖೆ ನಡೆದಿದೆ ಎಂದು ಎಸ್ಪಿ ಗೌರವ್ ಸಿಂಗ್ ತಿಳಿಸಿದ್ದಾರೆ.

‘ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ. ಆರೋಪ ಹೊತ್ತಿರುವ 78 ವರ್ಷದ ವ್ಯಕ್ತಿಯು ಸಾರ್ವಜನಿಕ ಬದುಕಿನಲ್ಲಿ ಪ್ರಭಾವ ಹೊಂದಿದ್ದಾರೆ. ಸನಾತನ ಧರ್ಮದ ಬಲವರ್ಧನೆಗಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈ ಪ್ರಕರಣ ರಾಜಕೀಯ ಪ್ರೇರಿತ’ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲರ ಕರಣ್ ನಂದಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.