ಸಂಭಲ್: ಬಿಜೆಪಿ ನಾಯಕರೊಬ್ಬರಿಗೆ ದುಷ್ಕರ್ಮಿಗಳು ವಿಷಕಾರಿ ಚುಚ್ಚುಮದ್ದು ನೀಡಿ, ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಸಂಭಲ್ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಗುಲ್ಫಾಮ್ ಸಿಂಗ್ ಯಾದವ್ (60) ಎಂದು ಗುರುತಿಸಲಾಗಿದೆ. ಜುನವೈ ಪೊಲೀಸ್ ಠಾಣೆ ವ್ಯಾಪ್ತಿಯ ದಫ್ತಾರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಯಾದವ್ ತಮ್ಮ ಜಮೀನಿನ ಬಳಿ ಕುಳಿತಿದ್ದ ವೇಳೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ವಿಷಕಾರಿ ಚುಚ್ಚುಮದ್ದನ್ನು ನೀಡಿ, ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
.ಜಿಎಸ್ಟಿ: ₹1.95 ಲಕ್ಷ ಕೋಟಿ ವಂಚನೆ.ವಿರೋಧ ಪಕ್ಷಗಳ ಸಭಾತ್ಯಾಗದ ನಡುವೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಸೂದೆ ಅಂಗೀಕಾರ.
ಅಸ್ವಸ್ಥರಾಗಿದ್ದ ಯಾದವ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ತನಿಖೆಗಾಗಿ ಪೊಲೀಸ್ ತಂಡವನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಯಾದವ್ ಅವರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಅವರು ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
.ವಿಧಾನಪರಿಷತ್ನಲ್ಲಿ ಅರಮನೆ ಮಸೂದೆ ಅಂಗೀಕಾರ: ವಿಪಕ್ಷ ಸಭಾತ್ಯಾಗ.ನಕಲಿ ದಾಖಲೆ ಅಪ್ಲೋಡ್: ಹನ್ನೆರಡು ಮಂದಿ ವಿರುದ್ಧ ಪ್ರಕರಣ.ಬೆಂಗಳೂರು: ‘ನಮ್ಮ ಮೆಟ್ರೊ’ಗೆ ಮರಳದ ಪ್ರಯಾಣಿಕರು.ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆಯಾದ ಮಾರ್ಕ್ ಕಾರ್ನಿ ಕೆನಡಾದ ನೂತನ ಪ್ರಧಾನಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.