ಚಂಡೀಗಢ: ಹರಿಯಾಣದ ಬಿಜೆಪಿ ನಾಯಕ, ಮಾಜಿ ಸಚಿವ ಕರಣ್ ದೇವ್ ಕಂಬೋಜ್ ಅವರು ಶುಕ್ರವಾರ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಂಬೋಜ್ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಸಿಗದ ಕಾರಣ ಅವರು ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನವನ್ನು ಇತ್ತೀಚೆಗೆ ತ್ಯಜಿಸಿದ್ದರು.

ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಉದಯ್ ಬನ್ ಉಪಸ್ಥಿತಿಯಲ್ಲಿ ಕರಣ್ ದೇವ್ ಕಾಂಗ್ರೆಸ್ ಸೇರಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಿಜೆಪಿಯು ಹಲವು ಹೊಸ ಮುಖಗಳು ಹಾಗೂ ಇತರೆ ಪಕ್ಷಗಳಿಂದ ಬಂದವರಿಗೆ ಟಿಕೆಟ್ ನೀಡಿದೆ. ಆದರೆ, ಹಲವು ವರ್ಷಗಳ ಕಾಲ ಪಕ್ಷಕ್ಕೆ ದುಡಿದವರನ್ನು ನಿರ್ಲಕ್ಷಿಸಿದೆ ಎಂದು ಕಂಬೋಜ್ ಅವರು ಕಳೆದ ವಾರ ಅಸಮಾಧಾನ ವ್ಯಕ್ತಪಡಿಸಿದ್ದರು.

ಹರಿಯಾಣದ 90 ವಿಧಾನಸಭೆ ಕ್ಷೇತ್ರಗಳಿಗೆ ಅ.5ರಂದು ಮತದಾನ ನಡೆಯಲಿದ್ದು, ಅ.8ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.