ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಬರಿಮಲೆ ವಿವಾದ: ಕೇರಳ ಹೈಕೋರ್ಟ್‌ನಿಂದ ಬಿಜೆಪಿ ನಾಯಕಿಗೆ ₹25 ಸಾವಿರ ದಂಡ

ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕೆ ತರಾಟೆ
Last Updated 4 ಡಿಸೆಂಬರ್ 2018, 16:14 IST
ಅಕ್ಷರ ಗಾತ್ರ

ಕೊಚ್ಚಿ: ಕೇರಳ ಪೊಲೀಸರುಶಬರಿಮಲೆಯಲ್ಲಿ ಭಕ್ತರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿ ಸಲ್ಲಿಸಿದ ರಾಜ್ಯ ಬಿಜೆಪಿಗೆ ಹಿನ್ನಡೆಯಾಗಿದೆ. ಆಧಾರರಹಿತ ಆರೋಪ ಮಾಡಿದ್ದಕ್ಕೆ ಮತ್ತು ನ್ಯಾಯಾಲಯದ ಸಮಯ ವ್ಯರ್ಥಗೊಳಿಸಿದ್ದಕ್ಕೆ ರಾಜ್ಯ ಬಿಜೆ‍ಪಿ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ಸುರೇಂದ್ರನ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಕೇರಳ ಹೈಕೋರ್ಟ್, ₹25,000 ದಂಡ ವಿಧಿಸಿದೆ.

ಇದರ ಬೆನ್ನಲ್ಲೇ ಕ್ಷಮೆಯಾಚಿಸಿದ ಶೋಭಾ ಅವರು ಅರ್ಜಿಯನ್ನು ಹಿಂಪಡೆದಿದ್ದಾರೆ. ಅರ್ಜಿಯನ್ನು ವಾಪಸ್ ಪಡೆಯಲು ಅರ್ಜಿದಾರರು ಮುಂದಾಗಿದ್ದಾರೆ ಎಂದು ಶೋಭಾ ಪರ ವಕೀಲರು ಮುಖ್ಯ ನ್ಯಾಯಮೂರ್ತಿಗಳನ್ನೊಳಗೊಂಡ ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಕೇರಳ ಕಾನೂನು ಸೇವೆಗಳ ಪ್ರಾಧಿಕಾರ’ಕ್ಕೆ ದಂಡ ವಿಧಿಸುವಂತೆ ಸೂಚಿಸಿತು.

ಶೋಭಾ ಅವರು ಸಲ್ಲಿಸಿದ ಅರ್ಜಿ ಆಧಾರರಹಿತವಾದದ್ದು ಮತ್ತು ಪ್ರಚಾರದ ಉದ್ದೇಶದಿಂದ ಕೂಡಿದ್ದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಪ್ರಚಾರಕ್ಕಾಗಿ ಈ ಅರ್ಜಿ ಸಲ್ಲಿಸಲಾಗಿದೆಯೇ ಎಂದೂಶೋಭಾ ಪರ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT