ನವದೆಹಲಿ: ಕಾಶ್ಮೀರದಲ್ಲಿ ಸ್ಥಳೀಯ ಬಿಜೆಪಿ ನಾಯಕನನ್ನು ಭಯೋತ್ಪಾದಕರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಅನಂತ್‌ನಾಗ್ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷ ಗುಲ್ ಮುಹಮ್ಮದ್ ಮಿರ್ ಅವರನ್ನು ಶನಿವಾರ ತಡರಾತ್ರಿ ಗುಂಡಿಟ್ಟು ಕೊಂದಿದ್ದಾರೆ.

ಮಹಮ್ಮದ್ ಮಿರ್ ನಿವಾಸಕ್ಕೆ ಬಂದಿದ್ದ ಭಯೋತ್ಪಾದಕರು ಮನೆ ಕೆಲಸದವರ ಬಳಿ ಕಾರಿನ ಕೀಯನ್ನು ಕೇಳಿದ್ದಾರೆ. ಇದನ್ನು ಗಮನಿಸಿದಮಹಮ್ಮದ್ ಮಿರ್ ಮನೆಯ ಹೊರಗಡೆ ಬಂದು ನೋಡಿದಾಗ ಏಕಾಏಕಿ ಗುಂಡು ಹೊಡೆದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಮಿರ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹತ್ಯೆಯನ್ನು ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಮುಹಮ್ಮದ್ ಮಿರ್ ಅವರಿಗೆ ಸರ್ಕಾರದಿಂದ ಭದ್ರತೆ ನೀಡಲಾಗಿತ್ತು. ಇತ್ತೀಚೆಗಷ್ಟೆ ಭದ್ರತೆಯನ್ನು ವಾಪಸುಪಡೆಯಲಾಗಿತ್ತು.

ಅನಂತ್‌ನಾಗ್ ವಿಧಾನಸಭಾ ಕ್ಷೇತ್ರದಿಂದ ಮುಹಮ್ಮದ್ ಮೀರ್‌ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.