ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ: ಮತ್ತೊಂದು ಸಭೆ ನಡೆಸಿದ ನಾಯಕರು

Published 6 ಜೂನ್ 2024, 7:37 IST
Last Updated 6 ಜೂನ್ 2024, 7:37 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಏರಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇದರ ಬೆನ್ನಲ್ಲೇ ಇಂದು ( ಗುರುವಾರ) ಹಿರಿಯ ಬಿಜೆಪಿ ನಾಯಕರು ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ನಿವಾಸದಲ್ಲಿ ಸಮಾಲೋಚನಾ ಸಭೆ ನಡೆಸಿದರು.

ಬಿಜೆಪಿ ಸ್ವತಂತ್ರರಾಗಿ ಅಧಿಕಾರದ ಗದ್ದುಗೆ ಏರಲು ವಿಫಲವಾಗಿದ್ದು, ಎನ್‌ಡಿಎ ಮೈತ್ರಿಕೂಟದ ಪಕ್ಷಗಳ ಸಹಾಯದಿಂದ ಬಿಜೆಪಿ ಸರ್ಕಾರ ರಚಿಸಲು ಮುಂದಾಗಿದೆ. ಆದರೆ ಇದೀಗ ಬಿಜೆಪಿ ನಾಯಕರು ಸಚಿವ ಸಂಪುಟ ರಚನೆ, ಖಾತೆಗಳ ಹಂಚಿಕೆ ಸೇರಿದಂತೆ ಪಕ್ಷ ತೆಗೆದುಕೊಳ್ಳಬೇಕಾದ ನಿಲುವುಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ನಾಳೆ (ಶುಕ್ರವಾರ) ಎನ್‌ಡಿಎ ಮೈತ್ರಿಕೂಟ ಪಕ್ಷಗಳ ಸಂಸದರು ಸಭೆ ಸೇರಿ, ಪ್ರಧಾನಿ ಮೋದಿ ಅವರನ್ನು ಔಪಚಾರಿಕವಾಗಿ ಆಯ್ಕೆ ಮಾಡಲಿದ್ದು, ಶನಿವಾರ ( ಜೂನ್‌ 8) ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಮೋದಿ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಮೋದಿ ಅವರನ್ನು ಎನ್‌ಡಿಎ ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ತೆಲುಗು ದೇಶಂ ಪಕ್ಷ 16 , ಜೆಡಿ (ಯು) 12 ಸಂಸದರನ್ನು ಹೊಂದಿದೆ. ಇದೀಗ ಈ ಎರಡೂ ಪಕ್ಷಗಳ ಮೈತ್ರಿಯೂ ಬಿಜೆಪಿ ಸರ್ಕಾರ ರಚಿಸಲು ಪ್ರಮುಖ ಪಾತ್ರವಹಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT