ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ಪೀಕರ್‌ ಚುನಾವಣೆ: ರಾಜನಾಥ್ ಸಿಂಗ್ ನಿವಾಸದಲ್ಲಿ ಎನ್‌ಡಿಎ, ಬಿಜೆಪಿ ನಾಯಕರ ಸಭೆ

Published 18 ಜೂನ್ 2024, 13:43 IST
Last Updated 18 ಜೂನ್ 2024, 13:43 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಸ್ಪೀಕರ್‌, ಡೆಪ್ಯೂಟಿ ಸ್ಪೀಕರ್‌ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಪ್ರಮುಖರು ಚರ್ಚೆ ನಡೆಸಿದರು.

ಮಂಗಳವಾರ ಸಂಜೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಬಿಜೆಪಿ ನಾಯಕರಾದ ಮನೋಹರ್ ಲಾಲ್ ಖಟ್ಟರ್, ಭೂಪೇಂದ್ರ ಯಾದವ್, ವೀರೇಂದ್ರ ಕುಮಾರ್, ಪಿಯೂಷ್ ಗೋಯಲ್, ಅನ್ನಪೂರ್ಣಾ ದೇವಿ, ಎಸ್ ಜೈಶಂಕರ್, ಜೆಡಿಯು ನಾಯಕ ಲಾಲನ್ ಸಿಂಗ್ ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಭಾಗವಹಿಸಿದ್ದರು.

ಸಭೆಯಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಜೂನ್ 26ರಂದು ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ.

ಏತನ್ಮಧ್ಯೆ, ಈ ವರ್ಷದ ಕೊನೆಯಲ್ಲಿ ವಿವಿಧ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಕೋರ್‌ ಕಮಿಟಿ ಸಭೆಯು ಮಂಗಳವಾರ ರಾತ್ರಿ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. 

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ. ಎಲ್. ಸಂತೋಷ್ ಅವರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT