ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿಯಿಂದ ದೇಶದಾದ್ಯಂತ ಅಭಿಯಾನ: ದೇವಸ್ಥಾನಗಳಲ್ಲಿ ಸ್ವಚ್ಛತೆಗೆ ಚಾಲನೆ

Published 14 ಜನವರಿ 2024, 14:50 IST
Last Updated 14 ಜನವರಿ 2024, 14:50 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಬಿಜೆಪಿಯು ದೇಶದಾದ್ಯಂತ ದೇವಾಲಯಗಳು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನಕ್ಕೆ ಭಾನುವಾರ ಚಾಲನೆ ದೊರೆಯಿತು. 

ಪಕ್ಷದ ನಾಯಕರು, ಕೇಂದ್ರ ಸಚಿವರು ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ದೇಶದ ವಿವಿಧ ಭಾಗಗಳಲ್ಲಿ ಅಭಿಯಾನಕ್ಕೆ ಕೈಜೋಡಿಸಿದರು. ರಾಮಮಂದಿರ ಉದ್ಘಾಟನೆಯ ದಿನ ಸಮೀಪಿಸುತ್ತಿರುವಾಗ ದೇಶದಾದ್ಯಂತ ಸಂಭ್ರಮದ ವಾತಾವರಣ ಮೂಡಿಸಲು ಬಿಜೆಪಿ ಈ ಅಭಿಯಾನ ಕೈಗೊಂಡಿದೆ. 

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕಾರ್ಯಕರ್ತರೊಂದಿಗೆ ನವದೆಹಲಿಯ ಕರೋಲ್ ಬಾಗ್‌ನಲ್ಲಿರುವ ಗುರು ರವಿದಾಸ್ ಮಂದಿರದ ಆವರಣ ಸ್ವಚ್ಛಗೊಳಿಸಿದರು. 

‘ಮಕರ ಸಂಕ್ರಾಂತಿಯಿಂದ ಜನವರಿ 22ರವರೆಗೆ (ಪ್ರಾಣ ಪ್ರತಿಷ್ಠಾಪನೆಯ ದಿನ) ದೇವಸ್ಥಾನಗಳು ಮತ್ತು ಯಾತ್ರಾ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿದ್ದರು. ಬಿಜೆಪಿ ಕಾರ್ಯಕರ್ತರು ದೇಶದಾದ್ಯಂತ ಈ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಿದ್ದಾರೆ’ ಎಂದು ನಡ್ಡಾ ತಿಳಿಸಿದರು.

ರಾಮಮಂದಿರದ ಉದ್ಘಾಟನೆಯ ದಿನದವರೆಗೆ ಪಕ್ಷದ ಕಾರ್ಯಕರ್ತರು ದೇವಸ್ಥಾನಗಳಲ್ಲಿ ವಿಶೇಷ ‘ಭಜನೆ– ಕೀರ್ತನೆ’ಯಲ್ಲೂ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ಕ್ರಮವಾಗಿ ಅಯೋಧ್ಯೆ ಹಾಗೂ ಗಾಂಧಿನಗರದ ದೇವಸ್ಥಾನದಲ್ಲಿ ಅಭಿಯಾನದಲ್ಲಿ ಪಾಲ್ಗೊಂಡರು. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಒಡಿಶಾದ ಬಾಲೇಶ್ವರದ ದೇವಸ್ಥಾನದಲ್ಲಿ ಸ್ವಚ್ಛತೆ ಕೈಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT