ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜಸ್ಥಾನ | ಬಿಜೆಪಿಯಿಂದ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ: ಗೋವಿಂದ್ ಸಿಂಗ್

Published 1 ಫೆಬ್ರುವರಿ 2024, 3:20 IST
Last Updated 1 ಫೆಬ್ರುವರಿ 2024, 3:20 IST
ಅಕ್ಷರ ಗಾತ್ರ

ಜೈಪುರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಸಿಬಿಐಯಂತಹ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ರಾಜಸ್ಥಾನ ಕಾಂಗ್ರೆಸ್ ಘಟಕದ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ 'ಭಾರತ ಜೋಡೊ ನ್ಯಾಯ ಯಾತ್ರೆ'ಯಿಂದ ಬಿಜೆಪಿ ದಿಗಿಲುಗೊಂಡಿದೆ ಎಂದು ಅವರು ಹೇಳಿದ್ದಾರೆ.

ಇದರಿಂದಾಗಿ ಕೇಂದ್ರ ತನಿಖಾ ದಳ, ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೆಶನಾಲಯವನ್ನು ದುರ್ಬಳಕೆ ಮಾಡುತ್ತಿದೆ. ಆ ಮೂಲಕ ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ದೇಶದ ಜನತೆಗೆ ನ್ಯಾಯ ಒದಗಿಸಲು ರಾಹುಲ್ ಗಾಂಧಿ ಹೋರಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್‌ನ ಕಾರ್ಯಕರ್ತರೆಲ್ಲ ಅವರ ಜತೆ ಸೇರಿದ್ದಾರೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT