ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರುದ್ಯೋಗವನ್ನೇ ದೇಶದ ಯುವಜನತೆಯ ಭವಿಷ್ಯವನ್ನಾಗಿ ಮಾಡಿದ ಬಿಜೆಪಿ: ಓವೈಸಿ ‌ಆರೋಪ

Published 21 ಏಪ್ರಿಲ್ 2024, 4:19 IST
Last Updated 21 ಏಪ್ರಿಲ್ 2024, 4:19 IST
ಅಕ್ಷರ ಗಾತ್ರ

ಹೈದರಾಬಾದ್‌: ಕಳೆದ 10 ವರ್ಷಗಳಲ್ಲಿ ನಿರುದ್ಯೋಗವನ್ನೇ ದೇಶದ ಯುವಜನತೆಯ ಭವಿಷ್ಯವನ್ನಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮಾಡಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ‌ಆರೋಪಿಸಿದ್ದಾರೆ.

ಏಕರೂಪ ನಾಗರಿಕ ಸಂಹಿತೆ (ಯುಸಿಸಿ), ನಿರುದ್ಯೋಗ, ಸಿಎಎ, ಭಾರತ–ಚೀನಾ ಗಡಿ ಬಿಕ್ಕಟ್ಟು ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸಿದ ಓವೈಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 400ಕ್ಕಿಂತಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಪ್ರಧಾನಿ ಮೋದಿ ಅವರು ಹೇಳುತ್ತಾರೆ. ಆದರೆ, ಪೆಟ್ರೋಲ್‌ ಬೆಲೆಯು ₹100 ಗಡಿ ದಾಟಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಶಾಸಕ, ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿ ಅವರಿಗೆ ಜೈಲಿನಲ್ಲಿ ವಿಷ ನೀಡಲಾಗಿತ್ತು ಎಂಬ ಆರೋಪವನ್ನು ಉಲ್ಲೇಖಿಸಿ ಮಾತನಾಡಿದ ಓವೈಸಿ, ದ್ವೇಷವನ್ನು ಹರಡುವುದರಿಂದ ಈ ದೇಶಕ್ಕೆ ಆಗುವ ಪ್ರಯೋಜನವೇನು ಎಂದು ಪ್ರಶ್ನಿಸಿದರು. ಇದರಿಂದ ದೇಶ ದುರ್ಬಲವಾಗುತ್ತಿದೆ ಎಂದು ಹೇಳಿದ್ದಾರೆ.

ಬುಧವಾರ ಶ್ರೀರಾಮನವಮಿ ಮೆರವಣಿಗೆ ವೇಳೆ ಹೈದರಾಬಾದ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮಸೀದಿ ಕಡೆಗೆ ಕಾಲ್ಪನಿಕ ಬಾಣವನ್ನು ಹೂಡುತ್ತಿರುವ ವಿಡಿಯೊ ಕುರಿತು ಪ್ರತಿಕ್ರಿಯಿಸಿದ ಓವೈಸಿ, ದೇಶದಲ್ಲಿ ಹಿಂದೂ–ಮುಸ್ಲಿಂ ದ್ವೇಷವನ್ನು ಪ್ರಚೋದಿಸಲು ಬಿಜೆಪಿಯು ಬಯಸುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ದೇಶದ ಶಾಂತಿಗೆ ಧಕ್ಕೆ ಉಂಟಾಗಿದೆ ಎಂದು ಓವೈಸಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT