ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುದುಚೇರಿಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಏನೇನು ಭರವಸೆ?

Last Updated 26 ಮಾರ್ಚ್ 2021, 18:46 IST
ಅಕ್ಷರ ಗಾತ್ರ

ಪುದುಚೇರಿ: ಪುದುಚೇರಿ ವಿಧಾನಸಭೆಗೆ ಬಿಜೆಪಿಯ ಪ್ರಣಾಳಿಕೆ, ‘ಬೆಸ್ಟ್‌ (BEST) ಪುದುಚೇರಿ’ ಅನ್ನು ಶುಕ್ರವಾರ ಇಲ್ಲಿ ಬಿಡುಗಡೆ ಮಾಡಲಾಯಿತು.

ಕೆ.ಜಿ. ತರಗತಿಯಿಂದ ಉನ್ನತ ಶಿಕ್ಷಣದವರೆಗೆ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ, ಜವಳಿ ಉದ್ದಿಮೆಗಳನ್ನು ಪುನರಾರಂಭಿಸುವುದು, ಜವಳಿ ಪಾರ್ಕ್‌ ಆರಂಭ ಸೇರಿದಂತೆ ಅನೇಕ ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ಪುದುಚೇರಿಯನ್ನು ವ್ಯಾಪಾರ (B), ಶಿಕ್ಷಣ (E), ಅಧ್ಯಾತ್ಮ (S) ಹಾಗೂ ಪ್ರವಾಸೋದ್ಯಮ (T) ಕೇಂದ್ರವಾಗಿಸುವ ಭರವಸೆಯನ್ನು ನೀಡಲಾಗಿದೆ. ತಮಿಳು ಕವಿ ಸುಬ್ರಹ್ಮಣ್ಯಭಾರತಿ ಅವರ ಪ್ರತಿಮೆ ಸ್ಥಾಪನೆ, ಹೂಡಿಕೆದಾರರನ್ನು ಆಕರ್ಷಿಸಲು ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜನೆ, ಬಂದರು ಹಾಗೂ ಮೂಲಸೌಲಭ್ಯಗಳನ್ನು ಉತ್ತಮಪಡಿಸುವ ಮೂಲಕ ಮೀನುಗಾರರ ಅಭಿವೃದ್ಧಿಗೆ ಕ್ರಮ ಮುಂತಾದವುಗಳ ಉಲ್ಲೇಖವೂ ಪ್ರಣಾಳಿಕೆಯಲ್ಲಿದೆ.

ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ‘ಬಿಜೆಪಿ ಅಧಿಕಾರಕ್ಕೆ ಬಂದರೆ, ಈವರೆಗೆ ಬೆಳಕು ಕಾಣದಿರುವ ಎಲ್ಲಾ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಲಾಗುವುದು. ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ನಿರೀಕ್ಷೆಯಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT