ಚಕ್ದಾಹ್ (ಪಶ್ಚಿಮ ಬಂಗಾಳ): ‘ಪಶ್ಚಿಮ ಬಂಗಾಳದ ನಾಡಿಯ ಜಿಲ್ಲೆಯ ಚಕ್ದಾಹ್ನಲ್ಲಿ ಭಾನುವಾರ ಮುಂಜಾನೆ ಬಿಜೆಪಿ ಸದಸ್ಯರೊಬ್ಬರ ಮೃತದೇಹ ಪತ್ತೆಯಾಗಿದೆ’ ಎಂದು ಪೊಲೀಸರು ತಿಳಿಸಿದರು.

ದಿಲೀಪ್ ಕೀರ್ತನಿಯ(31) ಮೃತರು. ಈ ಹಿನ್ನೆಲೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿರುವ ಸ್ಥಳೀಯ ಬಿಜೆಪಿ ಕಾರ್ಯಕರ್ತರು, ಟಿಎಂಸಿಯೇ ಇದಕ್ಕೆ ಹೊಣೆ ಎಂದು ಆರೋಪಿಸಿದ್ದಾರೆ.

‘ಶನಿವಾರ ರಾತ್ರಿ ವೇಳೆ ಮೂತ್ರವಿಸರ್ಜನೆಗೆಂದು ದಿಲೀಪ್ ಮನೆಯಿಂದ ಹೊರ ಹೋಗಿದ್ದರು. ಆದರೆ ಬಹಳ ಸಮಯದ ಬಳಿಕವೂ ಮನೆಗೆ ಹಿಂತಿರುಗಲಿಲ್ಲ. ಹಾಗಾಗಿ ಅವರಿಗಾಗಿ ಶೋಧ ನಡೆಸುವಾಗ ಮನೆಯಿಂದ ಸ್ವಲ್ಪ ದೂರದಲ್ಲಿ ಅವರು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಅವರ ಗುಪ್ತಾಂಗದ ಬಳಿ ಹಲವು ಗಾಯಗಳಾಗಿದ್ದವು’ ಎಂದು ಪೊಲೀಸರು ಹೇಳಿದರು.

ಈ ಕ್ಷೇತ್ರದಲ್ಲಿ ಶನಿವಾರ ಐದನೇ ಹಂತದ ಮತದಾನ ನಡೆದಿತ್ತು.

ಇದನ್ನೂ ಓದಿ... ಕೋವಿಡ್: ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಸಿಬಲ್ ಆಗ್ರಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.