ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ಪಡೆಯಲು BJPಯಿಂದ ED, CBI ದುರುಪಯೋಗ: ಖರ್ಗೆ

Published 14 ಮಾರ್ಚ್ 2024, 12:35 IST
Last Updated 14 ಮಾರ್ಚ್ 2024, 12:35 IST
ಅಕ್ಷರ ಗಾತ್ರ

ನವದೆಹಲಿ: ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ಪಡೆಯಲು ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ(ಇ.ಡಿ) ಮತ್ತು ಸಿಬಿಐ ಅನ್ನು ಬಿಜೆಪಿ ದುರುಪಯೋಗಪಡಿಸಿಕೊಂಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಮಾಧ್ಯಮ ವರದಿಗಳನ್ನು ಉಲ್ಲೇಖಸಿ ಮಾತನಾಡಿದ ಅವರು, ‘ಇದು ಹೆಚ್ಚಿನ ದೇಣಿಗೆ ಪಡೆಯುವುದಕ್ಕಾಗಿ ಮಾಡಿದ ಬ್ಲ್ಯಾಕ್‌ಮೇಲ್ ಅಥವಾ ಸುಲಿಗೆ ಅಥವಾ ಲೂಟಿಯೇ? ತನಿಖಾ ಸಂಸ್ಥೆಗಳು ದಾಳಿ ನಡೆಸಿದ ಬಳಿಕ 15 ಕಂಪನಿಗಳು ಬಿಜೆಪಿಗೆ ದೇಣಿಗೆ ನೀಡಿರುವುದು ಈಗಷ್ಟೇ ಹೊರಬಿದ್ದ ತನಿಖೆಯಿಂದ ಬಹಿರಂಗವಾಗಿದೆ. ವರದಿಗಳ ಪ್ರಕಾರ ಸಕ್ರೀಯ ವ್ಯವಹಾರ ನಡೆಸದ 4 ಕಂಪನಿಗಳನ್ನೂ ಒಳಗೊಂಡು ಒಟ್ಟು 45 ಕಂಪನಿಗಳು ಸುಮಾರು ₹400 ಕೋಟಿಯನ್ನು ಬಿಜೆಪಿಗೆ ದೇಣಿಗೆ ರೂಪದಲ್ಲಿ ನೀಡಿವೆ’ ಎಂದು ಹೇಳಿದರು.

‘ಸರ್ವಾಧಿಕಾರಿ ಮೋದಿ ಸರ್ಕಾರವು ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಆದರೆ ಅದು ಮಾತ್ರ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಹಣ ಪಡೆಯುತ್ತಿದೆ’ ಎಂದರು.

‘ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗೆ ನಂಬಿಕೆಯಿದ್ದರೆ ಪಕ್ಷದ ಹಣಕಾಸಿನ ಬಗ್ಗೆ ಸ್ವತಂತ್ರ ತನಿಖೆ ಮೂಲಕ ಶ್ವೇತಪತ್ರ ಹೊರಡಿಸಲಿ’ ಎಂದು ಸವಾಲು ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT