ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಸಂಸತ್ ಭದ್ರತಾ ಲೋಪ | ಪ್ರತಾಪ ಸಿಂಹ ಹೇಳಿಕೆ ದಾಖಲಿಸಲಾಗಿದೆ: ಪ್ರಲ್ಹಾದ ಜೋಶಿ

Published 22 ಡಿಸೆಂಬರ್ 2023, 7:36 IST
Last Updated 22 ಡಿಸೆಂಬರ್ 2023, 7:36 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್ ಭದ್ರತಾ ಲೋಪ ‍‍ಪ್ರಕರಣ ಸಂಬಂಧ ಬಿಜೆಪಿಯ ಮೈಸೂರು–ಕೊಡಗು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಶುಕ್ರವಾರ ತಿಳಿಸಿದ್ದಾರೆ.

ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.13ರ ಸಂಸತ್‌ ಭದ್ರತಾ ಲೋಪ ಸಂಬಂಧ ತನಿಖೆ ನಡೆಯುತ್ತಿದೆ. ವರದಿ ಸಲ್ಲಿಕೆ ಮಾಡಿದ ಬಳಿಕ ಕಾನೂನು ತನ್ನ ಕ್ರಮ ತೆಗೆದುಕೊಳ್ಳುತ್ತದೆ ಎಂದು ಜೋಶಿ ಹೇಳಿದ್ದಾರೆ.

ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಹಾರಿ, ಸ್ಮೋಕ್‌ ಕ್ಯಾನ್‌ಗಳನ್ನು ಹಾರಿಸಿದ್ದ ಆರೋಪಿಗಳು, ‍ಪ್ರತಾಪ್ ಸಿಂಹ ಅವರ ಹೆಸರಿನಲ್ಲಿ ಪಾಸ್‌ ಪಡೆದುಕೊಂಡಿದ್ದರು.

ಈ ಪೈಕಿ ಓರ್ವ ಆರೋಪಿ, ಮನೋರಂಜನ್ ಮೈಸೂರಿನವನು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT