ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: 148 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

Last Updated 18 ಮಾರ್ಚ್ 2021, 14:07 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಗೆ 148 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಗುರುವಾರ ಪ್ರಕಟಿಸಿದೆ. 5, 6, 7 ಮತ್ತು 8ನೇ ಹಂತಗಳಲ್ಲಿ ನಡೆಯುವ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳನ್ನು ಈ ಪಟ್ಟಿ ಒಳಗೊಂಡಿದೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಅವರು ಕೃಷ್ಣನಗರ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತರಾಗಿದ್ದ ಮುಕುಲ್‌ ರಾಯ್‌ ಅವರು 2017ರಲ್ಲಿ ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಪಶ್ಚಿಮ ಬಂಗಾಳದ 63 ಕ್ಷೇತ್ರಗಳಿಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್‌ 14ರಂದು ಬಿಜೆಪಿ ಪ್ರಕಟಿಸಿತ್ತು.

294 ವಿಧಾನಸಭಾ ಕ್ಷೇತ್ರಗಳಿರುವ ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29 ರಂದು ಮತದಾನ ನಡೆಯಲಿದೆ. ಮೇ.02ರಂದು ಫಲಿತಾಂಶ ಹೊರಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT