ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ವಿಧಾನ ಪರಿಷತ್‌: ಬಿಜೆಪಿ ಪಟ್ಟಿಯಲ್ಲಿ ಪಂಕಜಾ ಮುಂಡೆ ಹೆಸರಿಲ್ಲ

Last Updated 8 ಜೂನ್ 2022, 9:36 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್‌ನ 10 ಸ್ಥಾನಗಳಿಗೆ ಜೂನ್‌ 20ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಸ್ಪರ್ಧಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಅಚ್ಚರಿ ಎಂಬಂತೆ ಮಾಜಿ ಸಚಿವೆ ಪಂಕಜಾ ಮುಂಡೆ ಅವರ ಹೆಸರು ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಡಲಾಗಿದೆ.

ಬಿಜೆಪಿ ಮುಖಂಡ ಗೋಪಿನಾಥ್‌ ಮುಂಡೆ ಅವರ ಮಗಳು ಹಾಗೂ ಪ್ರಮೋದ್ ಮಹಾಜನ್ ಅವರ ಸೋದರ ಸಂಬಂಧಿ ಪಂಕಜಾ ಅವರ ಹೆಸರನ್ನು ಐವರು ಅಭ್ಯರ್ಥಿಗಳ ಪಟ್ಟಿಯಲ್ಲಿ ಸೇರಿಸಬಹುದು ಎಂದು ನಿರೀಕ್ಷಿಸಲಾಗಿತ್ತು.

2019ರ ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷಗಿರಿಯ ಪ್ರಬಲ ಸ್ಪರ್ಧಿ ಎನಿಸಿಕೊಂಡಿದ್ದ ಪಂಕಜಾ ಅವರು ಪಕ್ಷದಲ್ಲಿ ಕಡೆಗಣೆನೆಗೆ ಒಳಗಾದ ಬಗ್ಗೆ ಅಪಸ್ವರ ಕೇಳಿಬಂದಿತ್ತು. ಪಕ್ಷದ ವಿರುದ್ಧ ಬಂಡಾಯ ಏಳುವ ಸೂಚನೆಗಳನ್ನು ಪರೋಕ್ಷವಾಗಿ ನೀಡಿದ್ದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಾರ್ಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪಂಕಜಾ ಅವರು ತಮ್ಮ ಸೋದರ ಸಂಬಂಧಿ ಮತ್ತು ಎನ್‌ಸಿಪಿ ನಾಯಕ ಧನಂಜಯ್‌ ಮುಂಡೆ ವಿರುದ್ಧ ಸೋತಿದ್ದರು. ಪಂಕಜಾ ಅವರು 2014 ರಿಂದ 2019ರವರೆಗೆ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವವೆಯಾಗಿ ಸೇವೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT