ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಮೂರು ರಾಜ್ಯಗಳು ಸೇರಿದಂತೆ ಕೇಂದ್ರಾಡಳಿತ ಪ್ರದೇಶ ದೆಹಲಿಗೆ ಗುರುವಾರ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಪಕ್ಷದಲ್ಲಿ ಸಾಂಸ್ಥಿಕ ಬದಲಾವಣೆಗಳನ್ನು ಮಾಡಿ, ಹೊಸ ಮುಖಗಳಿಗೆ ಆಧ್ಯತೆ ನೀಡಿದ್ದಾರೆ.

ತ್ರಿಪುರಾ, ಹರಿಯಾಣ, ಪಂಜಾಬ್ ಮತ್ತು ದೆಹಲಿಗೆ ಹೊಸ ಮುಖಂಡರನ್ನು ನೇಮಕ ಮಾಡುವ ಮೂಲಕ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪಕ್ಷದ ಪದಾಧಿಕಾರಿಗಳ ಹೊಸ ತಂಡವನ್ನು ರಚಿಸುವ ಪ್ರಕ್ರಿಯೆಗೆ ನಿತಿನ್ ನವೀನ್ ಚಾಲನೆ ನೀಡಿದ್ದಾರೆ.

ಯಾರಿಗೆ ಒಲಿದಿದೆ ರಾಜ್ಯ ಘಟಕದ ಪಟ್ಟ?

ಹರ್ಷ ಮಲ್ಹೋತ್ರಾ: ದೆಹಲಿ ಸಂಸದ ಹಾಗೂ ಕೇಂದ್ರ ಸಚಿವ ಹರ್ಷ ಮಲ್ಹೋತ್ರಾ ಅವರಿಗೆ ದೆಹಲಿ ಬಿಜೆಪಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿದೆ.

ಅರ್ಚನಾ ಗುಪ್ತಾ: ಹರಿಯಾಣದ ಬಿಜೆಪಿ ಘಟಕದ ನೂತನ ಅಧ್ಯಕ್ಷೆಯಾಗಿ ಅರ್ಚನಾ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ.

ಅಭಿಷೇಕ್ ದೆಬ್ರಾಯ್: ಈಶಾನ್ಯ ರಾಜ್ಯಗಳಲ್ಲಿ ಒಂದಾಗಿರುವ ತ್ರಿಪುರಾದಲ್ಲಿ ಅಭಿಷೇಕ್ ದೆಬ್ರಾಯ್ ಅವರಿಗೆ ಪಕ್ಷದ ಸಾರಥ್ಯ ವಹಿಸಲಾಗಿದೆ.

ಧಿಲ್ಲೋನ್: ಶೀಘ್ರದಲ್ಲೇ ಚುನಾವಣೆ ಎದುರಿಸಲಿರುವ ಪಂಜಾಬ್ನಲ್ಲಿ ಕೇವಲ್ ಸಿಂಗ್ ಧಿಲ್ಲೋನ್ ಅವರನ್ನು ಹೊಸ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಬಿಜೆಪಿ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.