ನವದೆಹಲಿ:ಉತ್ತರ ಪ್ರದೇಶ ಮತ್ತು ಬಿಹಾರದಿಂದ ರಾಜ್ಯಸಭೆಯ ಎರಡು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಪಕ್ಷದ ವಕ್ತಾರ ಸುಧಾಂಶು ತ್ರಿವೇದಿ ಹಾಗೂ ಲೋಕಸಭೆಯ ಮಾಜಿ ಸದಸ್ಯ ಸತೀಶ್ ಚಂದ್ರ ದುಬೆ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ.

ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಮತ್ತು ರಾಜ್ಯಸಭಾ ಸದಸ್ಯ ರಾಮ್ ಜೇಠ್ಮಲಾನಿ ಅವರ ನಿಧನದಿಂದಾಗಿ ರಾಜ್ಯಸಭೆಯ ಎರಡು ಸ್ಥಾನಗಳು ತೆರ ವಾಗಿದ್ದವು.

ತ್ರಿವೇದಿ ಬಿಜೆಪಿಯ ವಕ್ತಾರ ಹುದ್ದೆ ಜೊತೆಗೆ. ರಕ್ಷಣಾ ಸಚಿವ ರಾಜ ನಾಥ್ ಸಿಂಗ್ ಅವರ ಆಪ್ತವಲಯ ದಲ್ಲೂ ಗುರುತಿಸಿಕೊಂಡಿದ್ದಾರೆ. ಅವರ ರಾಜಕೀಯ ಸಲಹೆಗಾರರಾಗಿದ್ದಾರೆ. ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ದುಬೆ ಅವರಿಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಟಿಕೆಟ್ ನಿರಾಕರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.