ಪಣಜಿ: ‘ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇದೇ 24 ಮತ್ತು 25 ರಂದು ಗೋವಾಗೆ ಭೇಟಿ ನೀಡಲಿದ್ದಾರೆ’ ಎಂದು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.
ವರದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡ್ಡಾ ಅವರು ಇಲ್ಲಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಪಕ್ಷದ ವಿವಿಧ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ’ ಎಂದು ತಿಳಿಸಿದರು.
ಜೆ.ಪಿ ನಡ್ಡಾ ಅವರು ಜುಲೈ 11 ರಂದು ಗೋವಾಕ್ಕೆ ಎರಡು ದಿನಗಳ ಪ್ರವಾಸ ಕೈಗೊಳ್ಳಬೇಕಾಗಿತ್ತು. ಆದರೆ ಕೆಲವೊಂದು ಕಾರಣಗಳಿಂದಾಗಿ ಭೇಟಿಯನ್ನು ಮುಂದೂಡಲಾಗಿತ್ತು.