ಚಿಂತಾಮಣಿ: ಮಹಿಳಾ ಮೀಸಲಾತಿ ಜಾರಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆಗಾಗಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಲೋಕಸಭೆ ಮಂಡನೆ ಮಾಡಿದ ಮಸೂದೆ ವಿರುದ್ಧ ಮತ ಚಲಾವಣೆ ಮಾಡಿದ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ನಡೆ ಖಂಡಿಸಿ ಬಿಜೆಪಿ ಸೋಮವಾರ ಪ್ರತಿಭಟನೆ ಹಮ್ಮಿಕೊಂಡಿತು.

ಜೊತೆಗೆ ಈ ಕುರಿತು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ದೇಶದ ಒಟ್ಟಾರೆ ಜನಸಂಖ್ಯೆ ಪೈಕಿ ಶೇ 50 ಮಹಿಳೆಯರಿದ್ದಾರೆ. ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ನಾರಿಶಕ್ತಿಯ ಸಬಲೀಕರಣಕ್ಕಾಗಿ ರೂಪಿಸಲಾಗಿರುವ ನಾರಿಶಕ್ತಿ ವಂದನ್ ಅಧಿನಿಯಮವು ಒಂದು ಮೈಲುಗಲ್ಲು. ಐತಿಹಾಸಿಕ ಬದಲಾವಣೆಯನ್ನು ಸ್ವಾಗತಿಸಿ ಸಹಕಾರ ನೀಡಬೇಕಿದ್ದ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ರಾಜಕೀಯ ಕಾರಣಕ್ಕಾಗಿ ಅಸಹಾರ ತೋರುತ್ತಿರುವುದು ಖಂಡನೀಯ. ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಪ್ರಜಾಪ್ರಭುತ್ವ ಹಾಗೂ ಸಾಮಾನ್ಯ ಜನರ ಹಿತಾಶಕ್ತಿಯ ವಿರೋಧಿಯಾಗಿವೆ ಎಂದು ಪ್ರತಿಭಟನಕಾರರು ದೂರಿದರು.

ದಶಕಗಳ ಕಾಲದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ಮೂಲೆಗುಂಪು ಮಾಡಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಾರ್ಯರೂಪಕ್ಕೆ ತರಲು ಮುಂದಾಗಿದೆ. ಆದರೆ, ಈಗಲೂ ಕಾಂಗ್ರೆಸ್ ತನ್ನ ಹಳೆಯ ಚಾಳಿಯನ್ನು ಮುಂದುವರಿಸುವ ಮೂಲಕ ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಪಕ್ಷದ ಮುಖಂಡ ಜಿ.ಎನ್. ವೇಣುಗೋಪಾಲ್ ಮಾತನಾಡಿ, ಸಾಂವಿಧಾನಿಕವಾಗಿ ನಡೆಯಬೇಕಾದ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆಯನ್ನು ರಾಜಕೀಯ ಲಾಭ-ನಷ್ಟದ ದೃಷ್ಟಿಯಿಂದ ನೋಡುವುದು ಖಂಡನೀಯ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧ ಎಂದರು.

ಜನಸಂಖ್ಯೆ, ಭೌಗೋಳಿಕ, ಆರ್ಥಿಕ, ಸಾಮಾಜಿಕ, ರಾಜಕೀಯ ಆಧಾರವಾಗಿ ಪ್ರಾತಿನಿಧ್ಯ ನೀಡುವುದು ಸಂವಿಧಾನದ ಆಶಯ. ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಇದನ್ನು ವಿರೋಧಿಸುತ್ತಿರುವುದು ಸರಿಯಲ್ಲ. ಮೀಸಲಾತಿಗೆ ತಾಂತ್ರಿಕ ಅಡೆತಡೆಗಳನ್ನು ಒಡ್ಡುವುದು, ಜನರನ್ನು ದಾರಿತಪ್ಪಿಸುವ, ತಪ್ಪು ಮಾಹಿತಿ ನೀಡುವ ಮೂಲಕ ವಿರೋಧ ಪಕ್ಷಗಳು ಮಹಿಳೆಯರು ಹಾಗೂ ದೇಶದ ನಾಗರಿಕರಿಗೆ ಸಿಗಬೇಕಾದ ನ್ಯಾಯಯುತ ಹಕ್ಕನ್ನು ವಿಳಂಬ ಮಾಡುತ್ತಿವೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಆರಂಭದಲ್ಲಿ ಪ್ರವಾಸಿ ಮಂದಿರದ ಬಳಿ ಜಮಾವಣೆಗೊಂಡ ಪ್ರತಿಭಟನಕಾರರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿ ತಲುಪಿದರು. ಮಹಿಳೆಯರು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-16-802760588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.