ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಬಿಜೆಪಿ ತೊರೆದ ರಾಜ್ಯಸಭಾ ಸದಸ್ಯ ಅಜಯ್‌ ಪ್ರತಾಪ್‌ ಸಿಂಗ್‌

Published 16 ಮಾರ್ಚ್ 2024, 13:49 IST
Last Updated 16 ಮಾರ್ಚ್ 2024, 13:49 IST
ಅಕ್ಷರ ಗಾತ್ರ

ಭೋಪಾಲ್‌: ಮಧ್ಯಪ್ರದೇಶದ ಬಿಜೆಪಿ ರಾಜ್ಯಸಭಾ ಸದಸ್ಯ ಅಜಯ್‌ ಪ್ರತಾಪ್‌ ಸಿಂಗ್‌ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ನೀಡಿದರು. ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

‘ಎಕ್ಸ್‌’ನಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಸಿಂಗ್‌ ಹಂಚಿಕೊಂಡಿದ್ದಾರೆ. ಆದರೆ, ರಾಜೀನಾಮೆಗೆ ಕಾರಣ ಏನೆಂದು ಅವರು ಪತ್ರದಲ್ಲಿ ವಿವರಿಸಿಲ್ಲ.

ಬಳಿಕ ಸೀಧಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಪಕ್ಷದಲ್ಲಿ ಭ್ರಷ್ಟರಿಗೆ ರಕ್ಷಣೆ ನೀಡಲಾಗುತ್ತಿದೆ. ರಾಜಕೀಯ ವ್ಯಾಪಾರಿಗಳಿಗೆ ಪಕ್ಷವು ‘ಅಡ್ಡ’ವಾಗಿದೆ’ ಎಂದು ವಾಗ್ದಾಳಿ ನಡೆಸಿದರು.

‘ಸಮೀಕ್ಷೆಯ ಆಧಾರದಲ್ಲಿ ಟಿಕೆಟ್ ನೀಡಲಾಗುತ್ತದೆ ಎಂದು ಪಕ್ಷವು ಹೇಳುತ್ತದೆ. ಆದರೆ, ಕೆಲವು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಈ ನಿಯಮ ಅನ್ವಯವಾದಂತೆ ಕಾಣಿಸುತ್ತಿಲ್ಲ’ ಎಂದು ದೂರಿದರು.

ಸೀಧಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಗಳಲ್ಲಿ ಸಿಂಗ್‌ ಕೂಡ ಒಬ್ಬರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT