ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಜೋರಾಂ ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Published 18 ಅಕ್ಟೋಬರ್ 2023, 6:25 IST
Last Updated 18 ಅಕ್ಟೋಬರ್ 2023, 6:25 IST
ಅಕ್ಷರ ಗಾತ್ರ

ಐಜ್ವಾಲ್‌: ಮಿಜೋರಾಂ ವಿಧಾನಸಭೆ ಚುನಾವಣೆಗೆ ಬಿಜೆಪಿಯು 13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.

ದಂಪ, ಹಚ್ಚೆಕ್‌, ಪಲಕ್‌, ಥೊರಂಗ್‌ನಲ್ಲಿ  ಎಂಎನ್‌ಎಫ್ ಪ್ರಾಬಲ್ಯ ಹೊಂದಿದೆ. ಈ ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.

ಸದ್ಯ ಮಿಜೋರಾಂನಲ್ಲಿ ಎಂಎನ್‌ಎಫ್‌ ಅಧಿಕಾರದಲ್ಲಿದೆ. ಈ ಚುನಾವಣೆಯಲ್ಲಿ ಎಂಎನ್‌ಎಫ್‌ಗೆ ಕಾಂಗ್ರೆಸ್‌, ಬಿಜೆಪಿ ಪ್ರಬಲ ಪೈಪೋಟಿ ನೀಡಲಿವೆ ಎನ್ನಲಾಗಿದೆ. 

ಮಿಜೋರಾಂನ 40 ಸ್ಥಾನಗಳ ವಿಧಾನಸಭೆಗೆ ನವೆಂಬರ್‌ 7ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್‌ 3ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT