ನವದೆಹಲಿ: ‘ಬಿಜೆಪಿ ಜಾತ್ಯತೀತ ಪಕ್ಷವಾಗಿದ್ದರೆ, ಕಾಂಗ್ರೆಸ್ ಅತ್ಯಂತ ಕೋಮವಾದಿ ಪಕ್ಷವಾಗಿದೆ’ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶುಕ್ರವಾರ ಪ್ರತಿಪಾದಿಸಿದರು.

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯನ್ನು ವಿರೋಧಿಸಿರುವ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಅಲ್ಪಸಂಖ್ಯಾತರ ಹೆಸರಿನಲ್ಲಿ ರಾಜಕೀಯ ಮಾಡುತ್ತಿವೆ ಎಂದು ಅವರು ವಾಗ್ದಾಳಿ ನಡೆಸಿದರು.

ಅಲ್ಪಸಂಖ್ಯಾತರಿಗೆ ಭಾರತದಲ್ಲಿ ದೊರೆಯುತ್ತಿರುವಷ್ಟು ಸೌಲಭ್ಯ ಜಗತ್ತಿನ ಇತರ ಯಾವುದೇ ದೇಶಗಳಲ್ಲೂ ಸಿಗುತ್ತಿಲ್ಲ ಎಂದ ಅವರು, ದೇಶದಲ್ಲಿ ಎಲ್ಲ ಪ್ರಜೆಗಳನ್ನೂ ಸಮಾನವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದರು.

ಚುನಾವಣಾ ಆಯೋಗವು ಬಿಹಾರದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆಗೆ ಮುಂದಾಗಿದೆ ಎಂದು ಕೆಲ ವಿರೋಧ ಪಕ್ಷಗಳ ನಾಯಕರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಸಿದ ರಿಜಿಜು, ‘ದೇಶದಲ್ಲಿ ಆರು ಅಲ್ಪಸಂಖ್ಯಾತ ಸಮುದಾಯಗಳಿವೆ. ಕಾಂಗ್ರೆಸ್ ಮತ್ತು ಇತರ ಕೆಲ ಪಕ್ಷಗಳು ಪದೇ ಪದೇ ಅಲ್ಪಸಂಖ್ಯಾತರ ದಾರಿತಪ್ಪಿಸುವ ಮೂಲಕ ಆತಂಕವನ್ನು ಹುಟ್ಟುಹಾಕುತ್ತಿವೆ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.