ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿಯು ಸರ್ವಾಧಿಕಾರದ ಧೋರಣೆ ತೋರುತ್ತಿದೆ: ಅರವಿಂದ ಕೇಜ್ರಿವಾಲ್‌

Published 28 ಮೇ 2024, 14:10 IST
Last Updated 28 ಮೇ 2024, 14:10 IST
ಅಕ್ಷರ ಗಾತ್ರ

ಬೆಂಗಳೂರು: ಎಎಪಿ ನಾಯಕರನ್ನು ಗುರಿಯಾಗಿಸಿಕೊಂಡು ಸುಳ್ಳು ಪ್ರಕರಣಗಳನ್ನು ದಾಖಲಿಸಿ ಅವರನ್ನು ಬಂಧಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದು ಸಂಪೂರ್ಣವಾಗಿ ಸರ್ವಾಧಿಕಾರದ ಧೋರಣೆಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಆರೋಪಿಸಿದ್ದಾರೆ.

ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ, ಸಚಿವೆ ಅತಿಶಿ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ‘ಎಕ್ಸ್‌‘ನಲ್ಲಿ ಕೇಜ್ರಿವಾಲ್‌ ಪೋಸ್ಟ್‌ ಹಂಚಿಕೊಂಡಿದ್ದಾರೆ.

‘ನಾನು ಈ ಮೊದಲೇ ಹೇಳಿದ್ದೆ. ನನ್ನ ನಂತರ ದೆಹಲಿ ಸಚಿವೆ ಆತಿಶಿ ಅವರನ್ನು ಬಂಧಿಸಲು ಹುನ್ನಾರ ನಡೆಸಲಾಗುತ್ತಿದೆ. ಸುಳ್ಳು ಪ್ರಕರಣಗಳಲ್ಲಿ ಎಎಪಿ ನಾಯಕರನ್ನು ಬಂಧಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ವಿರೋಧ ಪಕ್ಷಗಳ ನಾಯಕರನ್ನು ಬಂಧಿಸಲು ಮುಂದಾಗುತ್ತಾರೆ. ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸುವುದು ಮುಖ್ಯವಾಗಿದೆ‘ ಎಂದು ಕೇಜ್ರಿವಾಲ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT