ಪಕ್ಷದ ಮುಖ್ಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಂಸದ ಸಂಬಿತ್ ಪಾತ್ರ, ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆಯೂ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಪಕ್ಷದ ಸಮ್ಮತಿಯಿಂದಲೇ ಗಣೇಶನ ಪ್ರತಿಮೆ ಮೇಲೆ ಕಲ್ಲು ತೂರಿದ್ದಾರೆ ಮತ್ತು ಚಪ್ಪಲಿ ಎಸೆದಿದ್ದಾರೆ ಎಂದು ಆರೋಪಿಸಿದರು.