ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳು ಜಾತಿಯ ಬಣ್ಣ ನೀಡುತ್ತಿವೆ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಆರೋಪಿಸಿದ್ದಾರೆ.

ಈ ವಿಚಾರವಾಗಿ ಶುಕ್ರವಾರ ಟ್ವೀಟ್ ಮಾಡಿರುವ ಅವರು, ‘ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಧರ್ಮ ಮತ್ತು ಜಾತಿ ರಾಜಕಾರಣದ ಪ್ರಾಬಲ್ಯ ಹೆಚ್ಚುತ್ತಿದೆ. ಮಾಧ್ಯಮಗಳಲ್ಲಿ ಈ ಕುರಿತ ಸುದ್ದಿಗಳೇ ಹೆಚ್ಚು ಪ್ರಸಾರವಾಗುತ್ತಿವೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಕೋಮು ಮತ್ತು ಜಾತಿಗಳ ನಡುವೆ ದ್ವೇಷವನ್ನು ಉಂಟು ಮಾಡಲು ಎಸ್‌ಪಿ ಹಾಗೂ ಬಿಜೆಪಿಗಳು ಯತ್ನಿಸುತ್ತಿವೆ. ಈ ಕುರಿತು ಜನರು ಜಾಗರೂಕರಾಗಿರಬೇಕು’ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭೆಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.